ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಭಾರೀ ಗಾಳಿ ಮಳೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸಂಜೆ ಸುರಿದ ಜೋರಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಪಲ್ಟಿಯಾದ ಘಟನೆ ನಡೆದಿದೆ.
01:01 PM May 13, 2024 IST | Chaitra Kulal

ಕಲ್ಲಡ್ಕ: ಸಂಜೆ ಸುರಿದ ಜೋರಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಪಲ್ಟಿಯಾದ ಘಟನೆ ನಡೆದಿದೆ.

Advertisement

ಕಾರು ಚಾಲಕ ತೌಶೀಫ್ ಎಂಬಾತ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ. ತೌಶೀಫ್ ಕಾರಿನಲ್ಲಿ ಒಬ್ಬನೇ ಇದ್ದು ಮಾಣಿ ಕಡೆಯಿಂದ ಮಂಗಳೂರಿಗೆ ತೆರಳುವ ವೇಳೆ ಘಟನೆ ನಡೆದಿದೆ.

ಸಂಜೆ ಜೋರಾಗಿ ಸುರಿದ ಮಳೆಗೆ ಹೆದ್ದಾರಿಯಲ್ಲಿ ನೀರು ನಿಂತ ಪರಿಣಾಮವಾಗಿ ನಿಯಂತ್ರಣ ಕಳೆದು ಕಾರು ಪಲ್ಟಿಯಾಗಿದೆ ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ಸರಿಯಾಗಿ ಹರಿದುಹೋಗದೆ ಅಲ್ಲಲ್ಲಿ ನಿಲ್ಲುತ್ತಿರುವ ಬಗ್ಗೆ ವಾಹನ ಸವಾರರು ಆರೋಪ ಮಾಡಿದ್ದಾರೆ‌.

Advertisement

ಹೆದ್ದಾರಿಯಲ್ಲಿ ಅಲ್ಲಲ್ಲಿ ನೀರು ನಿಂತ ಪರಿಣಾಮ ಅಪಘಾತ ಸಂಭವಿಸುತ್ತಿದೆ ಎಂಬ ಆರೋಪವನ್ನು ವಾಹನ ಸವಾರರು ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದಾರೆ

Advertisement
Tags :
axidentCARKALLADKALatestNewsmangaloreNewsKarnatakaRAIN
Advertisement
Next Article