For the best experience, open
https://m.newskannada.com
on your mobile browser.
Advertisement

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆ ಬೀಳಲಿದೆ. ಇನ್ನುಳಿದಂತೆ ತುಮಕೂರು, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಕೋಲಾರ,ದಾವಣಗೆರೆ, ಚಾಮರಾಜನಗರ, ಚಿಕ್ಕಬಳ್ಳಾಪುರದಲ್ಲಿ ಸಾಧಾರಣ ಮಳೆಯಾಗಲಿದೆ.
07:56 AM May 13, 2024 IST | Nisarga K
ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ  ಯೆಲ್ಲೋ ಅಲರ್ಟ್
ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಬೆಂಗಳೂರು: ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆ ಬೀಳಲಿದೆ. ಇನ್ನುಳಿದಂತೆ ತುಮಕೂರು, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಕೋಲಾರ,ದಾವಣಗೆರೆ, ಚಾಮರಾಜನಗರ, ಚಿಕ್ಕಬಳ್ಳಾಪುರದಲ್ಲಿ ಸಾಧಾರಣ ಮಳೆಯಾಗಲಿದೆ.

Advertisement

ಹುಬ್ಬಳ್ಳಿಯಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಸುಳ್ಯ, ಹಳಿಯಾಳ, ಸಂಕೇಶ್ವರ, ಜಯಪುರ, ಬೆಳಗಾವಿ ಪಿಟಿಒ, ಕುಕನೂರು, ಮುನಿರಾಬಾದ್, ನಿಪ್ಪಾಣಿ, ಬಂಡೀಪುರ, ಭಾಗಮಂಡಲ, ಪೊನ್ನಂಪೇಟೆ, ಕಿರವತ್ತಿ, ಕೋಟ, ದೇವರಹಿಪ್ಪರಗಿ, ಅಣ್ಣಿಗೆರೆ, ಕಲಘಟಗಿ, ಹಿಡಕಲ್ ಅಣೆಕಟ್ಟು, ಹುಕ್ಕೇರಿ, ಹಗರಿಬೊಮ್ಮನಹಳ್ಳಿ, ಕಳಸ, ಬೇಗೂರು, ವಿರಾಜಪೇಟೆ, ಉಡುಪಿ, ಮುಂಡಗೋಡು, ಪುತ್ತೂರು, ಚಿಕ್ಕೋಡಿ, ಧಾರವಾಡ, ವಿಜಯಪುರ, ಇಂಡಿ, ದೇವದುರ್ಗ, ಕಡೂರು,ಹರಪನಹಳ್ಳಿ, ಬೆಂಗಳೂರಿನಲ್ಲಿ ಮಳೆಯಾಗಿದೆ.

ಇಂದು ಹಾವೇರಿ, ಧಾರವಾಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಮಂಡ್ಯ, ದಾವಣಗೆರೆ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ 40.4 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Advertisement

Advertisement
Tags :
Advertisement