ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಂಗಳೂರು: ಗಡಿ ಭಾಗದ ಪ್ರದೇಶಗಳಲ್ಲಿ ಭಾರಿ ಮಳೆ

ನೆರೆಯ ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ ಆದರೆ ಕರ್ನಾಟಕದಲ್ಲಿ ಮಳೆಯ ಅಬ್ಬರವಿಲ್ಲ. ಇದೀಗ ರಾಜ್ಯದಲ್ಲಿ ಡಿ. 4-5ರಂದು ಮಳೆಯ ಸಿಂಚನವಾಗಲಿದ್ದು, ಪ್ರತಿ ಗಂಟೆಗೆ 30 ಕಿ.ಮೀ ವೇಗದಲ್ಲಿ ನೆಲಗಾಳಿಯು ಬೀಸಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.
07:18 AM Dec 04, 2023 IST | Ashika S

ಬೆಂಗಳೂರು: ನೆರೆಯ ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ ಆದರೆ ಕರ್ನಾಟಕದಲ್ಲಿ ಮಳೆಯ ಅಬ್ಬರವಿಲ್ಲ. ಇದೀಗ ರಾಜ್ಯದಲ್ಲಿ ಡಿ. 4-5ರಂದು ಮಳೆಯ ಸಿಂಚನವಾಗಲಿದ್ದು, ಪ್ರತಿ ಗಂಟೆಗೆ 30 ಕಿ.ಮೀ ವೇಗದಲ್ಲಿ ನೆಲಗಾಳಿಯು ಬೀಸಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.

Advertisement

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಿಚುಂಗ್ ಚಂಡಮಾರುತದ ಪರಿಣಾಮದಿಂದಾಗಿ ತಮಿಳುನಾಡಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಭಾಗದ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 24 ಗಂಟೆಗಳಲ್ಲಿ ಮಿಚುಂಗ್ ಸೈಕ್ಲೋನ್ ತೀವ್ರಗೊಳ್ಳುವ ನಿರೀಕ್ಷೆ ಇದ್ದು, ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಮಳೆಯಾಗಲಿದೆ.

Advertisement

ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Advertisement
Tags :
LatetsNewsNewsKannadaಕರ್ನಾಟಕತಮಿಳುನಾಡುನೆಲಗಾಳಿಮಳೆಹಗುರ
Advertisement
Next Article