For the best experience, open
https://m.newskannada.com
on your mobile browser.
Advertisement

ಈ ಜಿಲ್ಲೆಗಳಲ್ಲಿ ಧಾರಕಾರ ಮಳೆ : ಸಿಡಿಲು ಬಡಿದು ಯುವಕ ಸಾವು

ನೆನ್ನೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಧಾರಕಾರವಾಗಿ ಮಳೆ ಸುರಿದು ಭೂಮಿಯನ್ನುವರುಣ ತಂಪಾಗಿಸಿದ್ದಾನೆ  ಆದರೆ ಕೆಲವಡೆ ಅವಾಂತರಗಳಾಗಿವೆ.ಕೃಷ್ಣನ ನಾಡು ಉಡುಪಿಯಲ್ಲೂ ಮಂಗಳವಾರ ಧಾರಾಕಾರ ಮಳೆ ಸುರಿದಿದೆ. ಉಡುಪಿ ನಗರ, ಮಣಿಪಾಲ, ಮಲ್ಪೆ, ಸಂತೆಕಟ್ಟೆ ಸುತ್ತುಮುತ್ತ ಉತ್ತಮ ಮಳೆಯಾಗಿದೆ. ಈ ನಡುವೆ ಕುಂದಾಪುರ ತಾಲೂಕಿನ ಸಿದ್ದಾಪುರದಲ್ಲಿ ಸಿಡಿಲು ಬಡಿದು 38 ವರ್ಷದ ಸುರೇಶ್ ಶೆಟ್ಟಿ ಸಾವನಪ್ಪಿದ್ದಾರೆ.
07:14 AM May 15, 2024 IST | Nisarga K
ಈ ಜಿಲ್ಲೆಗಳಲ್ಲಿ ಧಾರಕಾರ ಮಳೆ   ಸಿಡಿಲು ಬಡಿದು ಯುವಕ ಸಾವು
ಈ ಜಿಲ್ಲೆಗಳಲ್ಲಿ ಧಾರಕಾರ ಮಳೆ : ಸಿಡಿಲು ಬಡಿದು ಯುವಕ ಸಾವು

ಬೆಂಗಳೂರು : ನೆನ್ನೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಧಾರಕಾರವಾಗಿ ಮಳೆ ಸುರಿದು ಭೂಮಿಯನ್ನುವರುಣ ತಂಪಾಗಿಸಿದ್ದಾನೆ  ಆದರೆ ಕೆಲವಡೆ ಅವಾಂತರಗಳಾಗಿವೆ.ಕೃಷ್ಣನ ನಾಡು ಉಡುಪಿಯಲ್ಲೂ ಮಂಗಳವಾರ ಧಾರಾಕಾರ ಮಳೆ ಸುರಿದಿದೆ. ಉಡುಪಿ ನಗರ, ಮಣಿಪಾಲ, ಮಲ್ಪೆ, ಸಂತೆಕಟ್ಟೆ ಸುತ್ತುಮುತ್ತ ಉತ್ತಮ ಮಳೆಯಾಗಿದೆ. ಈ ನಡುವೆ ಕುಂದಾಪುರ ತಾಲೂಕಿನ ಸಿದ್ದಾಪುರದಲ್ಲಿ ಸಿಡಿಲು ಬಡಿದು 38 ವರ್ಷದ ಸುರೇಶ್ ಶೆಟ್ಟಿ ಸಾವನಪ್ಪಿದ್ದಾರೆ.

Advertisement

ದಕ್ಷಿಣ ಕನ್ನಡದಲ್ಲೂ ಮುಂಜಾನೆ ಬಂದ ಮಳೆರಾಯ ಕಾದ ಹಂಚಿನಂತೆ ಆಗಿದ್ದ ನೆಲವನ್ನು ತಂಪಾಗಿಸಿದ್ದಾನೆ.

ಇನ್ನು ಚಿಕ್ಕಮಗಳೂರಿನಲ್ಲಿ ಇಂದು, ಅಂದರೆ ಬುಧವಾರ ಬೆಳಗ್ಗೆಯೇ ಮಳೆ ಸುರಿದಿದೆ. ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಬೆಳ್ಳಂಬೆಳಗ್ಗೆ ವರ್ಷಧಾರೆ‌ ಸುರಿದಿದೆ. ಚಿಕ್ಕಮಗಳೂರು ನಗರ, ಮೂಡಿಗೆರೆ ಕೊಪ್ಪ, ಕಳಸ ದಲ್ಲಿ ಭಾರೀ ಮಳೆಯಾಗುತ್ತಿದೆ. ಬಿರುಗಾಳಿಯೊಂದಿಗೆ ಧಾರಾಕಾರವಾಗಿ ಮಳೆ ಸರಿಯುತ್ತಿದೆ. ಸುಮಾರು ಒಂದು ಗಂಟೆಗಳಿಂದಲೂ ಎಡೆಬಿಡದೆ ಸುರಿಯುತ್ತಿದೆ.

Advertisement

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪಟ್ಟಣದಲ್ಲಿ ಮಳೆ ಸುರಿದಿದ್ದು ಜನಜೀವನ ಅಸ್ತವ್ಯಸ್ತವಾಯ್ತು. ಬಿರುಗಾಳಿ, ಮಳೆಯಿಂದ ಮರಗಳು, 10ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿದವು. ಶಿರಸಿ ಪಟ್ಟಣದ ಸಹ್ಯಾದ್ರಿ ಕಾಲೋನಿಗೆ ತೆರಳುವ ರಸ್ತೆ ಬಂದ್ ಆಗಿತ್ತು. ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತವಾಗಿ ಜನ ಕತ್ತಲೆಯಲ್ಲಿ ಕಾಲ ಕಳೆಯುವಂತಾಯಿತು.

ಬಿರುಬಿಸಿಲ ನಾಡು ಯಾದಗಿರಿಯಲ್ಲಿ ಮಳೆ ಆಗಮನ ತಂಪುಂಟು ಮಾಡಿದೆ. 1 ಗಂಟೆ ವರುಣ ಅಬ್ಬರಿಸಿದ್ದು ರೈತರಿಗೆ ಖುಷಿ ತಂದಿದೆ.

ಬಾಗಲಕೋಟೆ ನಗರ ಹಾಗೂ ಜಿಲ್ಲೆಯಾದ್ಯಂತ ರಾತ್ರಿ ಧಾರಾಕಾರ ಮಳೆ ಸುರಿದಿದೆ. ಬಿಸಿಲ ಬೇಗೆಯಿಂದ ಬೆಂದುಹೋಗಿದ್ದ ಇಳೆ ತಣ್ಣಗಾಗಿದೆ.

Advertisement
Tags :
Advertisement