For the best experience, open
https://m.newskannada.com
on your mobile browser.
Advertisement

ಮೇ 18ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ

ಮೇ 18ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ ಐದು ದಿನಗಳ ಕಾಲ ಸಿಲಿಕಾನ್​ ಸಿಟಿಯಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ .
05:42 PM May 14, 2024 IST | Chaitra Kulal
ಮೇ 18ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ  ಹವಾಮಾನ ಇಲಾಖೆ

ಬೆಂಗಳೂರು: ಮೇ 18ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ ಐದು ದಿನಗಳ ಕಾಲ ಸಿಲಿಕಾನ್​ ಸಿಟಿಯಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ .

Advertisement

ಇಂದು ಉತ್ತರ ಒಳನಾಡು ಹಾಗೂ ಕರಾವಳಿ ಕಡೆಗಳಲ್ಲಿ ಮಾತ್ರ ಮಳೆಯಾಗಿದ್ದು, ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗಿದೆ. ನಿನ್ನೆ ಮಂಡ್ಯದಲ್ಲಿ 9 ಸೆಂ.ಮೀ ಮಳೆಯಾಗಿದೆ.

ಬೆಳಗಾವಿಯಲ್ಲಿ 6 ಸೆಂ.ಮೀ​, ಮೈಸೂರಿನಲ್ಲಿ 5 ಸೆಂ.ಮೀ​ ಮಳೆಯಾಗಿದೆ. ಮೇ 14ರಿಂದ 18ರವರೆಗೂ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಸಾಧರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಮೇತ ಭಾರೀ ಮಳೆಯಾಗಿದೆ ಎಂದು ಹವಾಮಾನ ತಜ್ಞರು ಎಚ್ಚರಿಗೆ ನೀಡಿದ್ದಾರೆ.

Advertisement

ಚಿಕ್ಕಮಗಳೂರುನಲ್ಲಿ ಕಳೆದ ಒಂದು ಗಂಟೆಯಿಂದ ಧಾರಾಕಾರವಾಗಿ ಮಳೆಯಾಗುತ್ತಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಕಾರ ಮಳೆಯಾಗುತ್ತಿದೆ. ‌ಮಳೆಯಿಂದ ಪ್ರವಾಸಿಗರು ಹಾಗೂ ಜನಜೀವನ ಅಸ್ತವ್ಯಸ್ತಗೊಂಡಿದೆ.

ಧಾರಾಕಾರ ಮಳೆಯಿಂದ ರೈತರು ಹಾಗೂ ಕೃಷಿಕರಲ್ಲಿ ಸಂತಸ ಮನೆ ಮಾಡಿದೆ. ಸತತ ಮಳೆಯಾದರೇ ತುಂಗಾ ನದಿ ಹರಿವು ಕೊಂಚ ಏರಿಕೆಯಾಗೋ ಸಾಧ್ಯತೆ ಇದೆ. ಇತ್ತ ಉಡುಪಿಯಲ್ಲೂ ಗುಡುಗು‌ ಸಹಿತ ಧಾರಾಕಾರ ಮಳೆಯಾಗುತ್ತಿದೆ. ಅದರಲ್ಲೂ ಸಿಲಿಕಾನ್​ ಸಿಟಿಯಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

Advertisement
Tags :
Advertisement