For the best experience, open
https://m.newskannada.com
on your mobile browser.
Advertisement

ರಾಜ್ಯದಲ್ಲಿ ನಾಳೆ, ನಾಡಿದ್ದು ಗುಡುಗು ಸಹಿತ ವರುಣಾರ್ಭಟ

ಎರಡು ದಿನದ ಹಿಂದೆ ಸಿಲಿಕಾನ್ ಸಿಟಿಗೆ ಮಳೆರಾಯ ತಂಪೆರೆದು ಹೋಗಿದ್ದಾನೆ. ಸದ್ಯ ಇದರ ಬೆನ್ನಲ್ಲೇ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನದಲ್ಲಿ ವರ್ಷದ ಮೊದಲ ಮಳೆ ಬಂದಿದ್ದು ಜನ ಸಖತ್ ಖುಷಿ ವ್ಯಕ್ತಪಡಿಸಿದ್ದಾರೆ.
06:36 PM May 06, 2024 IST | Ashitha S
ರಾಜ್ಯದಲ್ಲಿ ನಾಳೆ  ನಾಡಿದ್ದು ಗುಡುಗು ಸಹಿತ ವರುಣಾರ್ಭಟ

ಬೆಂಗಳೂರು: ಎರಡು ದಿನದ ಹಿಂದೆ ಸಿಲಿಕಾನ್ ಸಿಟಿಗೆ ಮಳೆರಾಯ ತಂಪೆರೆದು ಹೋಗಿದ್ದಾನೆ. ಸದ್ಯ ಇದರ ಬೆನ್ನಲ್ಲೇ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನದಲ್ಲಿ ವರ್ಷದ ಮೊದಲ ಮಳೆ ಬಂದಿದ್ದು ಜನ ಸಖತ್ ಖುಷಿ ವ್ಯಕ್ತಪಡಿಸಿದ್ದಾರೆ.

Advertisement

ಬೆಂಗಳೂರಲ್ಲಿ ಮೇ 7 ಮತ್ತು 8 ರಂದು ಮೋಡ ಕವಿದ ವಾತಾವರಣ ಸಿಲಿಕಾನ್ ಸಿಟಿಯನ್ನು ಆವರಿಸಲಿದೆ. ಮೇ 7 ಹಾಗೂ 8ರಂದು ಬೆಂಗಳೂರಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

ಬೆಂಗಳೂರು ಹೊರೆತುಪಡಿಸಿ 8 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಮೇತ ಮುಂದಿನ 3 ದಿನ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಯಲ್ಲಿ ಬೆಂಗಳೂರು ಗ್ರಾಮಾಂತರ, ಹೊಸಕೋಟೆ, ಮೈಸೂರು, ಹುಣಸೂರು, ಕೊಡಗು, ಕೆ.ಆರ್ ನಗರ, ಹಾಸನ, ಮಂಡ್ಯ ಜಿಲ್ಲೆಯಲ್ಲಿ 2 ಸೆಂಟಿ ಮೀಟರ್‌ನಷ್ಟು ಮಳೆಯಾಗುವ ಮುನ್ಸೂಚನೆ ಇದೆ.

Advertisement

ಉಳಿದಂತೆ ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು ಜಿಲ್ಲೆಯ ವಿವಿಧೆಡೆ ಮಳೆಯಾಗುವ ಮುನ್ಸೂಚನೆ ಇದೆ. ಮಳೆಯ ಜೊತೆ, ಜೊತೆಗೆ ಮೇ 7ರವರೆಗೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ಅಲೆ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ಅಲೆ ಜೊತೆಗೆ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

Advertisement
Tags :
Advertisement