ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ 2 ದಿನ ಭಾರೀ ಮಳೆ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
09:19 AM Dec 18, 2023 IST | Ashika S

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಸಾಮಾನ್ಯವಾಗಿ ರಾಜ್ಯದ ಕೆಲವೆಡೆ ಮೋಡ ಕವಿದ ವಾತಾವರಣವಿರಲಿದೆ ಹಾಗೂ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆಗಳಿವೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಕಂಡು ಬರಲಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ತಿಳಿಸಿದೆ.

Advertisement

ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಡಗು, ಮೈಸೂರು, ಮಂಡ್ಯ ಚಾಮರಾಜನಗರ, ಶಿವಮೊಗ್ಗ, ಹಾಸನ, ರಾಮನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲೂ ಬಾಗಲಕೋಟೆ, ಉಡುಪಿ, ರಾಯಚೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಹೆಚ್ಚಾದ ಚಳಿ: ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಚಳಿ ಹೆಚ್ಚಾಗಿದೆ. ಚಳಿಯ ವಾತಾವರಣ ಇನ್ನು ಮೂರು ದಿನಗಳ ಕಾಲ ಇರಲಿದ್ದು, ಚಳಿಯ ಜೊತಗೆ ನೆಲಗಾಳಿಯು ಹೆಚ್ಚಾಗಿದೆ.‌

Advertisement
Tags :
LatetsNewsNewsKannadaಇಲಾಖೆಮಳೆರಾಜ್ಯಹವಾಮಾನ
Advertisement
Next Article