For the best experience, open
https://m.newskannada.com
on your mobile browser.
Advertisement

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ ಸಾವನ್ನಪ್ಪಿದ್ದಾರೆ.
10:57 PM May 10, 2024 IST | Ashika S
ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ ಸಾವನ್ನಪ್ಪಿದ್ದಾರೆ.

Advertisement

ಶೇಖ್ ಹಝಾ ಬಿನ್ ಸುಲ್ತಾನ್ ಅವರು ಸದ್ಯ ಯುನೈಟೆಡ್ ಅರಬ್ ಆಳುತ್ತಿರುವ ಮನೆತನದ ಸದಸ್ಯರು. ಶೇಖ್ ಹಝಾ ಬಿನ್ ಸುಲ್ತಾನ್ ಅವರ ವಯಸ್ಸು ಎಷ್ಟು? ಇವರ ಸಾವಿಗೆ ಕಾರಣವೇನು ಅನ್ನೋದು ನಿಗೂಢವಾಗಿದೆ.

ಮೂಲಗಳ ಪ್ರಕಾರ ಶೇಖ್ ಹಝಾ ಬಿನ್ ಸುಲ್ತಾನ್ ಅವರಿಗೆ 58 ವರ್ಷ ವಯಸ್ಸಾಗಿತ್ತು. ಇವರು ಕುದುರೆಯ ರೇಸ್‌ನಲ್ಲಿ ಸಾಕಷ್ಟು ಪ್ರವೀಣರಾಗಿದ್ದರು. 2019ರಲ್ಲಿ ಶೇಖ್ ಹಝಾ ಬಿನ್ ಸುಲ್ತಾನ್ ಅವರ ತಂದೆ ಸಾವನ್ನಪ್ಪಿದ್ದರು. ಇದೀಗ ಶೇಖ್ ಹಝಾ ಬಿನ್ ಸುಲ್ತಾನ್ ಅವರು ನಿಗೂಢವಾಗಿ ಸಾವನ್ನಪ್ಪಿದ್ದಾರೆ.

Advertisement

ಶೇಖ್ ಹಝಾ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿದೆ. ಇವರ ಅಂತ್ಯಕ್ರಿಯೆಗೆ ದುಬೈ ದೊರೆ ಸೇರಿದಂತೆ ಇಡೀ ದೇಶದ ಗಣ್ಯರು ಭಾಗಿಯಾಗಿದ್ದರು. ಅಬುಧಾಬಿಯ ಶೇಖ್ ಸುಲ್ತಾನ್ ಬಿನ್ ಜಾಯೆದ್ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಲಾಗಿದೆ.

ಶೇಖ್ ಹಝಾ ಬಿನ್ ಸುಲ್ತಾನ್ ಅವರ ಸಾವಿಗೆ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಕರಾಳ ದಿನ ಆಚರಿಸಲಾಗಿದೆ.

Advertisement
Tags :
Advertisement