ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸಿಎಂ ನಾಪತ್ತೆ: ಹುಡುಕಿ ಕೊಟ್ಟವರಿಗೆ ಬಂಬರ್ ಬಹುಮಾನ ಘೋಷಣೆ

ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಎಲ್ಲಿದ್ದಾರೆಂದು ಪತ್ತೆ ಹಚ್ಚಲು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಕಳೆದ 28 ಗಂಟೆಯಿಂದ ಯಾರ ಸಂಪರ್ಕಕ್ಕೂ ಸಿಗದೇ ನಿಗೂಢವಾಗಿರುವ ಸೊರೇನ್ ಅವರನ್ನು ಪತ್ತೆ ಹಚ್ಚಲು ಎಲ್ಲಾ ರೀತಿಯ ಸರ್ಕಸ್ ಮಾಡಲಾಗ್ತಿದೆ. ಈ ಪ್ರಕರಣವು ಇದೀಗ ಜಾರ್ಖಂಡ್​​ನಲ್ಲಿ ರಾಜಕೀಯ ಸ್ವರೂಪ ಪಡೆದುಕೊಂಡಿದೆ.
02:31 PM Jan 30, 2024 IST | Ashitha S

ದೆಹಲಿ: ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಎಲ್ಲಿದ್ದಾರೆಂದು ಪತ್ತೆ ಹಚ್ಚಲು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಕಳೆದ 28 ಗಂಟೆಯಿಂದ ಯಾರ ಸಂಪರ್ಕಕ್ಕೂ ಸಿಗದೇ ನಿಗೂಢವಾಗಿರುವ ಸೊರೇನ್ ಅವರನ್ನು ಪತ್ತೆ ಹಚ್ಚಲು ಎಲ್ಲಾ ರೀತಿಯ ಸರ್ಕಸ್ ಮಾಡಲಾಗ್ತಿದೆ. ಈ ಪ್ರಕರಣವು ಇದೀಗ ಜಾರ್ಖಂಡ್​​ನಲ್ಲಿ ರಾಜಕೀಯ ಸ್ವರೂಪ ಪಡೆದುಕೊಂಡಿದೆ.

Advertisement

ಜಾರ್ಖಂಡ್ ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಬುಲಾಲ್ ಮರಂಡಿ ಸೋಶಿಯಲ್ ಮೀಡಿಯಾದಲ್ಲಿ ‘ಮುಖ್ಯಮಂತ್ರಿಗಳು ಕಾಣೆಯಾಗಿದ್ದಾರೆ’ ಎಂಬ ಪೋಸ್ಟ್ ಒಂದನ್ನು ಶೇರ್ ಮಾಡಿಕೊಂಡಿದ್ದಾರೆ. ನಾಪತ್ತೆಯಾಗಿರುವ ಜಾರ್ಖಂಡ್ ಮುಖ್ಯಮಂತ್ರಿಗಾಗಿ ಹುಡುಕಾಟ ನಡೆಯುತ್ತಿದೆ. ಯಾರಾದರೂ ನೋಡಿದ್ದಲ್ಲಿ, ಈ ವಿಳಾಸಕ್ಕೆ ತಿಳಿಸಿ. ಸರಿಯಾದ ಮಾಹಿತಿ ನೀಡಿದರೆ 11 ಸಾವಿರ ರೂಪಾಯಿ ಬಹುಮಾನ ನಿಡುವುದಾಗಿ ಘೋಷಣೆ ಮಾಡಿ ಗೇಲಿ ಮಾಡಿದೆ.

ಅಂದ್ಹಾಗೆ ಜಾರ್ಖಂಡ್ ಮುಖ್ಯಮಂತ್ರಿ ಕಳೆದ 28 ಗಂಟೆಗಳಿಂದ ನಾಪತ್ತೆ ಆಗಿದ್ದಾರೆ. ದೆಹಲಿಯ ನಿವಾಸದಿಂದ ನಾಪತ್ತೆಯಾಗಿರುವ ಸಿಎಂ ಹೇಮಂತ್ ಸೊರೇನ್ ಎಲ್ಲಿದ್ದಾರೆಂದು ಗೊತ್ತಿಲ್ಲ. ಇತ್ತ ದೆಹಲಿ ನಿವಾಸದ ಮೇಲೆ ದಾಳಿ ಮಾಡಿರುವ ಇಡಿ ಅಧಿಕಾರಿಗಳು 36 ಲಕ್ಷ ರೂಪಾಯಿ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Advertisement

Advertisement
Tags :
GOVERNMENTindiaLatestNewsNewsKannadaನವದೆಹಲಿನಾಪತ್ತೆಸಿಎಂ ಹೇಮಂತ್ ಸೊರೇನ್
Advertisement
Next Article