ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಂಗಳೂರಲ್ಲಿ ಮತ್ತೆ ದಾಳಿ ನಡೆಸಿದ ಎನ್‌ ಐಎ

ಮೊನ್ನೆ ಮೊನ್ನೆಯಷ್ಟೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಪ್ರದೇಶಗಳಲ್ಲಿ ಎನ್‌ಐಎ ದಾಳಿ ನಡೆದಿತ್ತು. ಬೆಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ದಳ ದಾಳಿ ನಡೆಸಿ ಶಂಕಿತ ಉಗ್ರ ಅಲಿ ಅಬ್ಬಾಸ್​ನನ್ನು ಬಂಧಿಸಲಾಗಿತ್ತು.
12:11 PM Dec 18, 2023 IST | Ashika S

ಬೆಂಗಳೂರು: ಮೊನ್ನೆ ಮೊನ್ನೆಯಷ್ಟೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಪ್ರದೇಶಗಳಲ್ಲಿ ಎನ್‌ಐಎ ದಾಳಿ ನಡೆದಿತ್ತು.

Advertisement

ಬೆಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ದಳ ದಾಳಿ ನಡೆಸಿ ಶಂಕಿತ ಉಗ್ರ ಅಲಿ ಅಬ್ಬಾಸ್​ನನ್ನು ಬಂಧಿಸಲಾಗಿತ್ತು. ಇದೀಗ ಮತ್ತೆ ಎನ್​ಐಎ ಅಧಿಕಾರಿಗಳು ಶಿವಾಜಿನಗರ, ಪುಲಿಕೇಶಿನಗರ, ಸುಲ್ತಾನ್ ಪಾಳ್ಯ, ಆರ್​.ಟಿ.ನಗರ, ಜೆ.ಸಿ.ನಗರದ ಚಿನ್ನಪ್ಪ ಗಾರ್ಡನ್ ಸೇರಿದಂತೆ ನಗರದ 20ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.

ಉಗ್ರ ಸಂಘಟನೆ ಐಸಿಸ್ ಜೊತೆ ಸಂಪರ್ಕ ಶಂಕೆ ಹಿನ್ನೆಲೆ ಡಿಸೆಂಬರ್ 9 ರಂದು ಪುಲಿಕೇಶಿನಗರದಲ್ಲಿರುವ ಮೋರ್ ರಸ್ತೆಯ ಅಲಿ ಅಬ್ಬಾಸ್ ಫ್ಲಾಟ್ ಮೇಲೆ ದಾಳಿ ನಡೆಸಿದ್ದ ಎನ್​ಐಎ, 16 ಲಕ್ಷಕ್ಕೂ ಹೆಚ್ಚು ನಗದು ಹಾಗೂ ಲ್ಯಾಪ್ ಟಾಪ್, ಪೆನ್ ಡ್ರೈವ್ ಜಪ್ತಿ ಮಾಡಿದ್ದರು. ಅದರಂತೆ ಅಲಿ ಅಬ್ಬಾಸ್ ಮೊಬೈಲ್, ಲ್ಯಾಪ್ ಟಾಪ್ ರಿಟ್ರೀವ್ ಮಾಡಲಾಗಿತ್ತು. ಈ ವೇಳೆ ಮಹತ್ವದ ಮಾಹಿತಿ ಕಲೆ ಹಾಕಿದ್ದ ಎನ್​ಐಎ ಅಧಿಕಾರಿಗಳು, ಇಂದು ಮತ್ತೆ ನಗರದ ಹಲವೆಡೆ ದಾಳಿ ನಡೆಸಿದ್ದಾರೆ.

Advertisement

ಮೂಲತಃ ಮುಂಬೈ ಮೂಲದ ಆಲಿ ಅಬ್ಬಾಸ್ ಪೇಟಿವಾಲ, ಸಾಪ್ಟ್ ವೇರ್ ಉದ್ಯೋಗಿಯಾಗಿದ್ದು‌, ಐಸಿಸ್ ನೊಂದಿಗೆ ಸಂಪರ್ಕ್ ಹೊಂದಿದ್ದ ಎಂದು ತಿಳಿದು ಬಂದಿದೆ. ಜೊತೆಗೆ ಈತ ಟ್ಯಾನರಿ ರೋಡ್ ನಲ್ಲಿ ಉರ್ದು ಶಾಲೆ ನಡೆಸ್ತಿದ್ದ. ಈತನ ಪತ್ನಿ ಡಯಾಟಿಕ್ ಹಾಸ್ಪಿಟಲ್ ನಡೆಸುತ್ತಿದ್ದಾಳೆ. ಪುಲಿಕೇಶಿನಗರದ ಮೋರ್ ರಸ್ತೆಯಲ್ಲಿ ಶಾಮಾಜ್ ಎಂಬುವರಿಂದ 2018ರಲ್ಲಿ 62 ಲಕ್ಷಕ್ಕೆ ಫ್ಲ್ಯಾಟ್ ಖರೀದಿ ಮಾಡಿದ್ದ ಅಲಿ, ತನ್ನ ಹೆಂಡತಿ ಮಕ್ಕಳು ಹಾಗೂ ತಂದೆ ಜೊತೆ ವಾಸವಿದ್ದನು.

Advertisement
Tags :
LatetsNewsNewsKannadaಅಲಿ ಅಬ್ಬಾಸ್​ಎನ್‌ಐಎದಾಳಿಪ್ರದೇಶಬೆಂಗಳೂರುಶಂಕಿತ ಉಗ್ರ
Advertisement
Next Article