ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ ಹೈಕೋರ್ಟ್ ಸೂಚನೆ ನೀಡಿ ಮಾಲ್​ನ ಬೀಗ ಓಪನ್ ಮಾಡಲಾಗಿದೆ.
12:47 PM May 17, 2024 IST | Chaitra Kulal

ಬೆಂಗಳೂರು: ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ ಹೈಕೋರ್ಟ್ ಸೂಚನೆ ನೀಡಿ ಮಾಲ್​ನ ಬೀಗ ಓಪನ್ ಮಾಡಲಾಗಿದೆ.

Advertisement

ಎಂದಿನಂತೆ ಶಾಪಿಂಗ್ ಮಾಡಲು ಜನ ಮುಂದಾಗಿದ್ದಾರೆ. ಮಂತ್ರಿ ಮಾಲ್ 50 ಕೋಟಿ ರೂ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದು ಈ ಪೈಕಿ 20 ಕೋಟಿ ರೂ.ಗಳನ್ನ ಜುಲೈ 31 ರೊಳಗೆ ಪಾವತಿಸುವುದಾಗಿ ಮುಚ್ಚಳಿಕೆ ನೀಡಿದೆ.

ಈ ಹಿನ್ನೆಲೆಯಲ್ಲಿ ಮಾಲ್ ತೆರೆಯಲು‌ ಸೂಚನೆ ನೀಡಲಾಗಿದೆ. 250ಕ್ಕೂ ಅಧಿಕ ಮಳಿಗೆ ಹಾಗೂ ವ್ಯಾಪಾರ ಹಿನ್ನೆಲೆಯಲ್ಲಿ ಹೈಕೋರ್ಟ್ ಬಿಬಿಎಂಪಿಗೆ ಮಾಲ್ ತೆರೆಯುವಂತೆ ಸೂಚನೆ ನೀಡಿದೆ.

Advertisement

ಬಿಬಿಎಂಪಿಗೆ ಬರೋಬ್ಬರಿ 50 ಕೋಟಿ ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಮಾಲ್ ಮಾಲೀಕರಿಗೆ ಮೇ.10ರ ಶುಕ್ರವಾರ ಅಕ್ಷಯ ತೃತೀಯದ ದಿನವೇ ಪಾಲಿಕೆ ಅಧಿಕಾರಿಗಳು ಶಾಕ್ ಕೊಟ್ಟಿದ್ದರು. ಈ ಹಿಂದೆ ಹಲವು ಬಾರಿ ಎಚ್ಚರಿಕೆ ಕೊಟ್ಟರೂ ಬಾಕಿ ತೆರಿಗೆ ಪಾವತಿಸದ ಮಾಲ್ ಗೆ ಎಂಟನೇ ಬಾರಿಗೆ ಪಾಲಿಕೆ ಬೀಗ ಹಾಕಿತ್ತು. ಒಂದು ವಾರದ ಬಳಿಕ ಇಂದು ಮಂತ್ರಿ ಮಾಲ್ ಮತ್ತೆ ಓಪನ್ ಆಗಿದೆ.

Advertisement
Tags :
BANGALOREBBMPHIGH COURTLatestNewsMantrimalNewsKarnataka
Advertisement
Next Article