ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕರ್ತವ್ಯಕ್ಕೆ ಪ್ರೌಢಶಾಲಾ ಶಿಕ್ಷಕರಿಗೆ ಸಮ್ಮತಿ

ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸುವ ಆದೇಶವನ್ನು ಇದೀಗ ಹಿಂಪಡೆದಿದೆ. ಬುಧವಾರ ಹೊರಡಿಸಿರುವ ಆದೇಶದ ಮೇರಗೆ ಪ್ರೌಢಶಾಲಾ ಶಿಕ್ಷಕರಿಗೆ ತರಬೇತಿ ನೀಡಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸುವಂತೆ ಎಲ್ಲ ಜಿಲ್ಲೆಗಳ ಉಪನಿರ್ದೇಶಕರಿಗೆ ಮಂಡಳಿ ತಿಳಿಸಿದೆ. ಮರಿತಿಪ್ಪೆಗೌಡ ಮತ್ತು ಇತರೆ ಶಾಸಕರು ಹಾಗೂ ಶಿಕ್ಷಕ ಸಮುದಾಯ ವರ್ಗದವರ ಮನವಿ ಮೇರೆಗೆ ಈ ಆದೇಶವನ್ನು ಹೊರಡಿಸಿದ್ದಾರೆ.
11:34 AM Mar 14, 2024 IST | Nisarga K
ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕರ್ತವ್ಯಕ್ಕೆ ಪ್ರೌಢಶಾಲಾ ಶಿಕ್ಷಕರಿಗೆ ಸಮ್ಮತಿ

ಬೆಂಗಳೂರು: ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸುವ ಆದೇಶವನ್ನು ಇದೀಗ ಹಿಂಪಡೆದಿದೆ. ಬುಧವಾರ ಹೊರಡಿಸಿರುವ ಆದೇಶದ ಮೇರಗೆ ಪ್ರೌಢಶಾಲಾ ಶಿಕ್ಷಕರಿಗೆ ತರಬೇತಿ ನೀಡಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸುವಂತೆ ಎಲ್ಲ ಜಿಲ್ಲೆಗಳ ಉಪನಿರ್ದೇಶಕರಿಗೆ ಮಂಡಳಿ ತಿಳಿಸಿದೆ. ಮರಿತಿಪ್ಪೆಗೌಡ ಮತ್ತು ಇತರೆ ಶಾಸಕರು ಹಾಗೂ ಶಿಕ್ಷಕ ಸಮುದಾಯ ವರ್ಗದವರ ಮನವಿ ಮೇರೆಗೆ ಈ ಆದೇಶವನ್ನು ಹೊರಡಿಸಿದ್ದಾರೆ.

Advertisement

ಈ ಹಿಂದೆ ಮಾರ್ಚ್‌-ಏಪ್ರಿಲ್‌ ಪರೀಕ್ಷೆ ಸಮಯದಲ್ಲಿ ಪ್ರೌಢಶಾಲಾ ಶಿಕ್ಷಕರೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ವೇಳೆ ನಕಲು ಮಾಡಲು ಸಹಾಯ ಮಾಡುತ್ತಿದ್ದಾರೆ ಎಂದು ದೂರು ಕೇಳಿ ಬಂದಿತ್ತು ಈ ವಿಚಾರವಾಗಿ 38 ಶಿಕ್ಷಕರನ್ನು ಅಮಾನತುಗೊಳಿಸಲಾಗಿತ್ತು.

ಈ ಕಾರಣ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ ಇದಕ್ಕೆ ಅವಕಾಶ ಕೊಡಬಾರದು ಎಂಬ ಉದ್ದೇಶಕ್ಕೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷೆ ವೇಳೆ ಪ್ರಾಥಮಿಕ ಶಿಕ್ಷಕರನ್ನು ಆಯೋಜಿಸುವುದಾಗಿ ಆದೇಶ ಬಿಡುಗಡೆ ಮಾಡಿತ್ತು ಆದರೆ ಈ ಕ್ರಮಕ್ಕೆ ಶಿಕ್ಷಕರು ವಿರೋಧ ವ್ಯಕ್ತ ಪಡಿಸಿದ್ದು ಮತ್ತೊಮ್ಮೆ ಆದೇಶವನ್ನು ಪರಿಶೀಲಿಸುವಂತೆ ವಿಧಾನಪರಿಶತ್ತಿಗೆ ತಪ್ಪಣ್ಣ ಮತ್ತು ಮರಿತಿಪ್ಪೆಗೌಡ ಪತ್ರ ಬರೆದಿದ್ದರು. ಈ ಕಾರಣ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ ತನ್ನ ಆದೇಶವನ್ನು ಹಿಂಪಡೆದಿದೆ.

Advertisement

Advertisement
Tags :
EXAMHigh SchoolLatestNewsNewsKannadaPRIMARY SCHOOLSSLCSTUDENTS
Advertisement
Next Article