ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹಿಜಾಬ್ ನಿಷೇಧ: ಕಾನೂನಿನಂತೆ ಕ್ರಮ ಕೈಗೊಳ್ಳುತ್ತೇವೆ ಎಂದ ಮಧು ಬಂಗಾರಪ್ಪ

ಶಾಲಾ-ಕಾಲೇಜುಗಳಲ್ಲಿ ಈ ಹಿಂದೆ ಹೇರಲಾಗಿದ್ದ ಹಿಜಾಬ್ ನಿಷೇಧ ಕ್ರಮವನ್ನು ಹಿಂತೆಗೆದುಕೊಳ್ಳುವ ಕುರಿತು ಸಿಎಂ ಸಿದ್ದರಾಮಯ್ಯ ಹೇಳಿಕೆ ವ್ಯಾಪಕ ಚರ್ಚೆಗೆ ಕಾರಣವಾಗಿರುವಂತೆ ಶಿಕ್ಷಣ ಸಚಿವ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ. 
06:57 AM Dec 24, 2023 IST | Ashika S

ಬೆಂಗಳೂರು:  ಶಾಲಾ-ಕಾಲೇಜುಗಳಲ್ಲಿ ಈ ಹಿಂದೆ ಹೇರಲಾಗಿದ್ದ ಹಿಜಾಬ್ ನಿಷೇಧ ಕ್ರಮವನ್ನು ಹಿಂತೆಗೆದುಕೊಳ್ಳುವ ಕುರಿತು ಸಿಎಂ ಸಿದ್ದರಾಮಯ್ಯ ಹೇಳಿಕೆ ವ್ಯಾಪಕ ಚರ್ಚೆಗೆ ಕಾರಣವಾಗಿರುವಂತೆ ಶಿಕ್ಷಣ ಸಚಿವ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ.

Advertisement

ಮಾಧ್ಯಮಗಳೊಂದಿಗೆ ಮಾತನಾಡಿದ ಮಧು ಬಂಗಾರಪ್ಪ ಶಾಲಾ-ಕಾಲೇಜುಗಳಲ್ಲಿ ಈ ಹಿಂದೆ ಹೇರಲಾಗಿದ್ದ ಹಿಜಾಬ್ ನಿಷೇಧ ಕ್ರಮವನ್ನು ಹಿಂತೆಗೆದುಕೊಳ್ಳುವ ಕುರಿತು ಕಾನೂನಿನಂತೆ ಕ್ರಮ ಕೈಗೊಳ್ಳುತ್ತೇವೆ ಎಂದು  ಹೇಳಿದ್ದಾರೆ.

'ಹಿಜಾಬ್  ವಿಚಾರದಲ್ಲಿ ಕಾನೂನು ಏನು ಹೇಳುತ್ತದೆ ಎಂಬುದನ್ನು ನೋಡಿ ಕಾನೂನು ತಜ್ಞರ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಶಾಲಾ ಕಾಲೇಜುಗಳಲ್ಲಿ ಈ ಹೇಳಿಕೆಯಿಂದ ಗೊಂದಲ ಆಗಿದ್ದರೆ, ಏನು ಮಾಡಬೇಕು ಎಂಬುದರ ಬಗ್ಗೆ ಮಾಹಿತಿ ಪಡೆದು ಚರ್ಚೆ ಮಾಡಿ ನಿರ್ದೇಶನ ನೀಡುತ್ತೇನೆ ಎಂದು ಹೇಳಿದರು.

Advertisement

ಈ ಬಗ್ಗೆ ಸಿಎಂ ಜೊತೆ ಮಾತನಾಡಿ ಮುಂದಿನ ತೀರ್ಮಾನ ಮಾಡಲಾಗುತ್ತದೆ. ಬಿಜೆಪಿ  ನಾಯಕರು ಇಂತಹ ವಿಚಾರದಲ್ಲಿ ರಾಜಕೀಯ ಮಾಡಲು ಹೋಗಿ ಜನ ಅವರನ್ನು ತಿರಸ್ಕರಿಸಿದ್ದಾರೆ.  ಇದು ಸೂಕ್ಷ್ಮವಾದ ವಿಚಾರವಾಗಿದ್ದು, ಎಲ್ಲಾ ಸಾಧಕ-ಬಾಧಕಗಳ ಬಗ್ಗೆ ಕಾನೂನು ತಜ್ಞರ ಜೊತೆ ಮಾತುಕತೆ ನಡೆಸುತ್ತೇವೆ. ನಾವು ಏನೇ ತೀರ್ಮಾನ ಮಾಡಿದರೂ ಅದು ಕಾನೂನು ತಜ್ಞರ ಸಲಹೆ ಪಡೆದು ಕಾನೂನಿನಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

Advertisement
Tags :
LatetsNewsNewsKannadaಕ್ರಮಚರ್ಚೆಮಧು ಬಂಗಾರಪ್ಪಸಿಎಂ ಸಿದ್ದರಾಮಯ್ಯಹಿಜಾಬ್ ನಿಷೇಧಹೇಳಿಕೆ
Advertisement
Next Article