For the best experience, open
https://m.newskannada.com
on your mobile browser.
Advertisement

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನಿಗೆ ಚೂರಿ ಇರಿತ

ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
11:52 AM Apr 15, 2024 IST | Ashika S
ಬಂಟ್ವಾಳ  ಹಿಂದೂ ಸಂಘಟನೆಯ ಮುಖಂಡನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Advertisement

ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಚೂರಿ ಇರಿತವಾಗಿದೆ. ಜಕ್ರಿಬೆಟ್ಟು ಎಂಬಲ್ಲಿ ಘಟನೆ ನಡೆದಿದ್ದು, ಚೂರಿ ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.

ರಿಕ್ಷಾದಲ್ಲಿ ಜೊತೆಯಾಗಿ ತೆರಳುತ್ತಿದ್ದಾಗಲೇ ಚೂರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಸ್ನೇಹಿತ ರವಿ ಎಂಬಾತ ಕೃತ್ಯ ಎಸಗಿದ್ದಾನೆ. ರವಿ ಚೂರಿಯಿಂದ ಇರಿದು ಮತ್ತೆ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.

Advertisement

ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ‌ಬೇಟಿ ನೀಡಿದ್ದು , ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನು ಚೂರಿ ಇರಿತಕ್ಕೊಳಗಾಗಿ ಮಂಗಳೂರು ಏ.ಜೆ ಆಸ್ಪತ್ರೆಯಲ್ಲಿ ದಾಖಲಾಗಿರುವ ಹಿಂದೂ ಯುವಸೇನೆಯ ಪುಷ್ಪರಾಜ್ ಜಕ್ರಿಬೆಟ್ಟು ಇವರನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿಯಾಗಿ ಆರೋಗ್ಯ ವಿಚಾರಿಸಿ, ಮುಂದಿನ ಚಿಕಿತ್ಸೆಯ ಬಗ್ಗೆ ವೈದ್ಯರುಗಳೊಂದಿಗೆ ಮಾಹಿತಿ ಪಡೆದರು.

Advertisement
Tags :
Advertisement