ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಟ್ರಾಫಿಕ್ ಪೊಲೀಸ್ ಮೇಲೆ ಕಾರು ಹತ್ತಿಸಿ ಪಾಕಿಸ್ತಾನ ಮಹಿಳೆ ಪರಾರಿ :ವಿಡಿಯೋ ವೈರಲ್‌

ವೇಗವಾಗಿ ಹೋಗುತ್ತಿದ್ದ ಮಹಿಳೆ  ಕಾರು ಅಡ್ಡಗಟ್ಟಿದ ಟ್ರಾಫಿಕ್ ಪೊಲೀಸ್ ಮೇಲೆ ಕಾರು ಹತ್ತಿಸಿ ಮಹಿಳೆ ಪರಾರಿಯಾಗಿರು ಘಟನೆ ಪಾಕಿಸ್ತಾನದ ಇಸ್ಲಾಮಾಬಾದ್​​ನಲ್ಲಿ ನಡೆದಿದೆ. ಪೊಲೀಸ್​​ ಅಧಿಕಾರಿಯೊಬ್ಬರಿಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಫರಾಹ್ ಎಂದು ಗುರುತಿಸಲ್ಪಟ್ಟ ಮಹಿಳೆಯನ್ನು ಏಪ್ರಿಲ್ 24 ರಂದು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
03:41 PM Apr 25, 2024 IST | Nisarga K
ಟ್ರಾಫಿಕ್ ಪೊಲೀಸ್ ಮೇಲೆ ಕಾರು ಹತ್ತಿಸಿ ಪಾಕಿಸ್ತಾನ ಮಹಿಳೆ ಪರಾರಿ :ವಿಡಿಯೋ ವೈರಲ್‌

ಪಾಕಿಸ್ತಾನ:  ವೇಗವಾಗಿ ಹೋಗುತ್ತಿದ್ದ ಮಹಿಳೆ  ಕಾರು ಅಡ್ಡಗಟ್ಟಿದ ಟ್ರಾಫಿಕ್ ಪೊಲೀಸ್ ಮೇಲೆ ಕಾರು ಹತ್ತಿಸಿ ಮಹಿಳೆ ಪರಾರಿಯಾಗಿರು ಘಟನೆ ಪಾಕಿಸ್ತಾನದ ಇಸ್ಲಾಮಾಬಾದ್​​ನಲ್ಲಿ ನಡೆದಿದೆ. ಪೊಲೀಸ್​​ ಅಧಿಕಾರಿಯೊಬ್ಬರಿಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಫರಾಹ್ ಎಂದು ಗುರುತಿಸಲ್ಪಟ್ಟ ಮಹಿಳೆಯನ್ನು ಏಪ್ರಿಲ್ 24 ರಂದು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

Advertisement

ಜನವರಿ 2 ರಂದು ನಸೀರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ನಂತರ ಬಂಧನವನ್ನು ತಪ್ಪಿಸಲು ಮಹಿಳೆ ತಲೆಮರೆಸಿಕೊಂಡಿದ್ದಾಳೆ ಎಂದು ರಾವಲ್ಪಿಂಡಿ ಪೊಲೀಸರು ತಿಳಿಸಿದ್ದರು. ಇದೀಗ ಎಸ್‌ಎಸ್‌ಪಿ ಕಾರ್ಯಾಚರಣೆಯ ನೇತೃತ್ವದ ಆರ್‌ಪಿಒ ರಾವಲ್ಪಿಂಡಿ ಬಾಬರ್ ಸರ್ಫ್ರಾಜ್ ಅಲ್ಪಾ ಅವರು ಆರೋಪಿಯನ್ನು ಬಂಧಿಸಲು ವಿಶೇಷ ತಂಡವನ್ನು ರಚಿಸಿದ್ದರು. ನಸೀರಾಬಾದ್ ಪೊಲೀಸರು ಆಧುನಿಕ ತಂತ್ರಜ್ಞಾನ ಬಳಸಿ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

“ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ. ಕಾನೂನು ಸುವ್ಯವಸ್ಥೆಯನ್ನು ಪ್ರಶ್ನಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರಾವಲ್ಪಿಂಡಿ ಪೊಲೀಸರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisement

Advertisement
Tags :
ACCIDENTHIT AND RUN CASELatestNewsNewsKarnatakaPAKISTHANPOLICETRAFFICwomen
Advertisement
Next Article