For the best experience, open
https://m.newskannada.com
on your mobile browser.
Advertisement

ಮಟಮಟ ಮಧ್ಯಾಹ್ನ ರಸ್ತೆಯಲ್ಲೇ ಸರಸ: ಪ್ರಶ್ನಿಸಿದ ಪೊಲೀಸ್ ಮೇಲೆ ಕಾರು ಹರಿಸಿದ ಜೋಡಿ

ರಸ್ತೆ ಬದಿಯೇ ಕಾರಿನಲ್ಲಿ ಯುವಕ ಯುವತಿ ಸರಸ ಸಲ್ಲಾಪ ನಡೆಸುತ್ತಿದಾಗ ಈ ವೇಳೆ ಪ್ರಶ್ನೆ ಮಾಡಿದ ಪೊಲೀಸ್ ಅಧಿಕಾರಿ ಮೇಲೆ ಕಾರುಹರಿಸಲು ಯತ್ನಿಸಿ ಹಿಟ್ ಹ್ಯಾಂಡ್ ರನ್ ಮಾಡಿ ಜೋಡಿಗಳು ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
12:27 PM Jan 25, 2024 IST | Ashitha S
ಮಟಮಟ ಮಧ್ಯಾಹ್ನ ರಸ್ತೆಯಲ್ಲೇ ಸರಸ  ಪ್ರಶ್ನಿಸಿದ ಪೊಲೀಸ್ ಮೇಲೆ ಕಾರು ಹರಿಸಿದ ಜೋಡಿ

ಬೆಂಗಳೂರು: ರಸ್ತೆ ಬದಿಯೇ ಕಾರಿನಲ್ಲಿ ಯುವಕ ಯುವತಿ ಸರಸ ಸಲ್ಲಾಪ ನಡೆಸುತ್ತಿದಾಗ ಈ ವೇಳೆ ಪ್ರಶ್ನೆ ಮಾಡಿದ ಪೊಲೀಸ್ ಅಧಿಕಾರಿ ಮೇಲೆ ಕಾರುಹರಿಸಲು ಯತ್ನಿಸಿ ಹಿಟ್ ಹ್ಯಾಂಡ್ ರನ್ ಮಾಡಿ ಜೋಡಿಗಳು ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಹಾಡಹಗಲೇ ಸಾರ್ವಜನಿಕ ರಸ್ತೆಯ ಬದಿ ಕಾರಿನೊಳಗೆ ಸರಸದಲ್ಲಿ  ತೊಡಗಿದ್ದ ಯುವಕ- ಯುವತಿಗೆ ಬುದ್ದಿ ಹೇಳಲು ಮುಂದಾದ ಪೊಲೀಸ್ ಅಧಿಕಾರಿ ಮೇಲೆಯೇ ಕಾರು ಹತ್ತಿಸಲು ಯತ್ನಿಸಿರುವ ಘಟನೆ ಜ್ಞಾನ ಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ಜ.20ರಂದು ಮಧ್ಯಾಹ್ನ 3.30ರ ಸುಮಾರಿಗೆ ಉಪಕಾರ ಲೇಔಟ್‌ನ ಮೂರನೇ ಮುಖ್ಯ ರಸ್ತೆಯ 3ನೇ ಅಡ್ಡರಸ್ತೆಯ ಊರ್ವ ರೆಸಿಡೆನ್ಸಿ ಬಳಿ ಈ ಘಟನೆ ನಡೆದಿದೆ.

ಜೋಡಿಗೆ ಬುದ್ಧಿ ಹೇಳಬೇಕು ಎಂದುಕೊಂಡ ಸಬ್ ಇನ್ಸ್​​ಪೆಕ್ಟರ್ ಮಹೇಶ್ ಕಾರಿನ ಬಳಿ ತೆರಳಿದ್ದಾರೆ. ಕಾರಿನ ಬಳಿ ಹೋಗಿ ನಂಬರ್ ಪ್ಲೇಟ್ ಪರಿಶೀಲನೆ ನಡೆಸಿದ್ದಾರೆ. ಅಷ್ಟರಲ್ಲಿ ಎಚ್ಚೆತ್ತುಕೊಂಡ ಯುವಕ ಏಕಾಏಕಿ ಕಾರು ಚಲಾಯಿಸಿದ್ದಾನೆ. ದಿಢೀರ್ ಕಾರು ಚಲಿಸಲು ಆರಂಭಿಸಿದ ಕಾರಣ ಸಬ್ ಇನ್ಸ್​​ಪೆಕ್ಟರ್ ಮಹೇಶ್ ಬಾನೆಟ್ ಮೇಲೆ ಬಿದ್ದಿದ್ದಾರೆ. ಅವರು ಕಾರಿನ ಬಾನೆಟ್ ಹಿಡಿದುಕೊಂಡು ಒದ್ದಾಡುತ್ತಿದ್ದರೂ ಲೆಕ್ಕಿಸದ ಯುವಕ ಕಾರು ಚಲಾಯಿಸಿದ್ದಾನೆ. ಏಕಾಏಕಿ ಕಾರನ್ನು ರಿವರ್ಸ್ ತೆಗೆದು ಮತ್ತೆ ಮುಂದಕ್ಕೆ ಚಲಾಯಿಸಿದ್ದಾನೆ. ಪರಿಣಾಮವಾಗಿ ಕೆಳಬಿದ್ದ ಸಬ್ ಇನ್ಸ್​ಪೆಕ್ಟರ್ ಗಂಭೀರವಾಗಿ ಗಾಯಗೊಂಡಿದ್ದಾರೆ.

Advertisement

ಗಾಯಗೊಂಡಿರುವ ಮಹೇಶ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Tags :
Advertisement