ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

5ನೇ ಟೆಸ್ಟ್‌ ಪಂದ್ಯ: ಹೊಸ ದಾಖಲೆ ಸೃಷ್ಟಿಸುವ ಭರವಸೆಯಲ್ಲಿ ಹಿಟ್‌ ಮ್ಯಾನ್‌

ಭಾರತ ಮತ್ತುಇಂಗ್ಲೆಂಡ್ ನಡುವಿನ 5ನೇ ಟೆಸ್ಟ್‌ ಪಂದ್ಯ ಮಾರ್ಚ್‌ 7 ರಂದು ಆರಂಭವಾಗಲಿದೆ. ಈ ಪಂದ್ಯವು ಧರ್ಮಶಾಲಾ ಕ್ರೀಡಾಂಗಣ ದಲ್ಲಿ ನಡೆಯಲಿದೆ. ಈ ಪಂದ್ಯದ ಮೂಲಕ ರೋಹಿತ್‌ ಶರ್ಮಾ ಹೊಸ ದಾಖಲೆ ಬರೆಯುವ ಅವಕಾಶ ಇದೀಗ ಅವರ ಮುಂದಿದೆ. ಅಂದರೆ ಇಂಗ್ಲೆಂಡ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಹಿಟ್​ಮ್ಯಾನ್ ಬ್ಯಾಟ್​ನಿಂದ ಒಂದು ಸಿಕ್ಸ್ ಮೂಡಿಬಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ 50 ಸಿಕ್ಸ್ ಬಾರಿಸಿದ ಮೊದಲ ಭಾರತೀಯ ಎನಿಸಿಕೊಳ್ಳಲಿದ್ದಾರೆ.
09:55 AM Mar 05, 2024 IST | Nisarga K
5ನೇ ಟೆಸ್ಟ್‌ ಪಂದ್ಯ: ಹೊಸ ದಾಖಲೆ ಸೃಷ್ಟಿಸುವ ಭರವಸೆಯಲ್ಲಿ ರೋಹಿತ್‌ ಶರ್ಮಾ

ಧರ್ಮಶಾಲಾ:   ಭಾರತ ಮತ್ತುಇಂಗ್ಲೆಂಡ್ ನಡುವಿನ 5ನೇ ಟೆಸ್ಟ್‌ ಪಂದ್ಯ ಮಾರ್ಚ್‌ 7 ರಂದು ಆರಂಭವಾಗಲಿದೆ. ಈ ಪಂದ್ಯವು ಧರ್ಮಶಾಲಾ ಕ್ರೀಡಾಂಗಣ ದಲ್ಲಿ ನಡೆಯಲಿದೆ. ಈ ಪಂದ್ಯದ ಮೂಲಕ ರೋಹಿತ್‌ ಶರ್ಮಾ ಹೊಸ ದಾಖಲೆ ಬರೆಯುವ ಅವಕಾಶ ಇದೀಗ ಅವರ ಮುಂದಿದೆ. ಅಂದರೆ ಇಂಗ್ಲೆಂಡ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಹಿಟ್​ಮ್ಯಾನ್ ಬ್ಯಾಟ್​ನಿಂದ ಒಂದು ಸಿಕ್ಸ್ ಮೂಡಿಬಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ 50 ಸಿಕ್ಸ್ ಬಾರಿಸಿದ ಮೊದಲ ಭಾರತೀಯ ಎನಿಸಿಕೊಳ್ಳಲಿದ್ದಾರೆ.

Advertisement

ಇದುವರೆಗಿನ ಪಂದ್ಯದಲ್ಲಿ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಇದುವರೆಗೆ 31 ಪಂದ್ಯಗಳಲ್ಲಿ 53 ಇನಿಂಗ್ಸ್ ಆಡಿರುವ ರೋಹಿತ್ ಶರ್ಮಾ 49 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಎಂಬುದು ವಿಶೇಷ. ಸ್ಟೋಕ್ಸ್ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಇದುವರೆಗೆ 44 ಪಂದ್ಯಗಳಲ್ಲಿ 81 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 78 ಸಿಕ್ಸ್ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಒಂದು ಸಿಕ್ಸ್ ಬಾರಿಸಿದರೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ 50 ಸಿಕ್ಸ್ ಬಾರಿಸಿದ ಮೊದಲ ಭಾರತೀಯ ಹಾಗೂ ವಿಶ್ವದ 2ನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ವಿಶೇಷ ಎಂದರೆ ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿ ಯಶಸ್ವಿ ಜೈಸ್ವಾಲ್ ಕೂಡ ಕಾಣಿಸಿಕೊಂಡಿದ್ದಾರೆ. ಕೇವಲ 8 ಟೆಸ್ಟ್ ಪಂದ್ಯಗಳನ್ನಾಡಿರುವ ಜೈಸ್ವಾಲ್ ಈಗಾಗಲೇ 26 ಸಿಕ್ಸ್​ಗಳನ್ನು ಸಿಡಿಸಿದ್ದಾರೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ 5ನೇ ಸ್ಥಾನ ಅಲಂಕರಿಸಿದ್ದಾರೆ.

Advertisement

ಇಂಗ್ಲೆಂಡ್‌ ವಿರುದ್ಧದ ಇದುವರೆಗಿನ 5 ಟೆಸ್ಟ್‌ ಪಂದ್ಯಗಳಲ್ಲಿ ಸರಣಿಯಲ್ಲಿ ಇಂಡಿಯಾ ಟೀಮ್ ನ ಆಟ ನೋಡುವುದಾದರೆ, ಈ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಗೆದ್ದರೆ, ಉಳಿದ ಮೂರು ಪಂದ್ಯಗಳಲ್ಲಿ ಬ್ಯಾಕ್ ಟು ಬ್ಯಾಕ್ ಭಾರತ ತಂಡ ಜಯ ಸಾಧಿಸಿತ್ತು. ಅದರಂತೆ 3-1 ಅಂತರದಿಂದ ಟೀಮ್ ಇಂಡಿಯಾ ಸರಣಿ ಗೆದ್ದುಕೊಂಡಿದೆ. ಈಗ 5ನೇ ಪಂದ್ಯದ ಟ್ರೋಫಿ ತನ್ನದಾಗಿಸುವ ಭರವಸೆಯಲ್ಲಿದೆ ಇಂಡಿಯಾ ಟೀಮ್‌.

ಇಂಗ್ಲೆಂಡ್ ತಂಡವು ಕೊನೆಯ ಪಂದ್ಯದಲ್ಲಿ ಗೆಲ್ಲುವ ಭರವಸೆಯಲ್ಲಿದೆ . ಹಾಗಾಗಿ ಧರ್ಮಶಾಲಾದಲ್ಲಿ ನಡೆಯಲಿರುವ ಅಂತಿಮ ಟೆಸ್ಟ್ ಪಂದ್ಯದಲ್ಲೂ ಉಭಯ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

Advertisement
Tags :
cricketenglandindiaLatestNewsNewsKannadaROHITH SHARMATEST CRICKET
Advertisement
Next Article