For the best experience, open
https://m.newskannada.com
on your mobile browser.
Advertisement

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ ನಾರಾಯಣ ಹೆಲ್ತ್ , ಸಾಗರ್ ಆಸ್ಪತ್ರೆ, ಸಮರ್ಥ, ಜೆಎಂಜೆ ಹಾಗೂ ವಿಮಲಾಲಯ್ಯ ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ  ಇ-ಮೇಲ್​ ಬಂದಿದೆ.
10:29 PM May 12, 2024 IST | Ashika S
ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ ನಾರಾಯಣ ಹೆಲ್ತ್ , ಸಾಗರ್ ಆಸ್ಪತ್ರೆ, ಸಮರ್ಥ, ಜೆಎಂಜೆ ಹಾಗೂ ವಿಮಲಾಲಯ್ಯ ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ  ಇ-ಮೇಲ್​ ಬಂದಿದೆ.

Advertisement

ಈ ಬಾರಿ ನೇರವಾಗಿ ಬೆಂಗಳೂರು ಪೊಲೀಸರ ಇ-ಮೇಲ್ ಅಕೌಂಟ್​​ಗೆ ಬಾಂಬ್ ಬೆದರಿಕೆ ಬಂದಿದೆ. ಬಾಂಬ್ ಬೆದರಿಕೆ ಇ-ಮೇಲ್ ಹಿನ್ನೆಲೆ ಪೊಲೀಸರು ತಪಾಸಣೆ ನಡೆಸಿದ್ದು, ಈ ವೇಳೆ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ.

ಹೀಗಾಗಿ ತಪಾಸಣೆ ನಂತರ ಹುಸಿ ಬಾಂಬ್ ಬೆದರಿಕೆ ಬಗ್ಗೆ ಪೊಲೀಸರು ದೃಢಪಡಿಸಿದ್ದಾರೆ.

Advertisement

ಇತ್ತೀಚೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ಕೆಲವು ವಿಮಾನಗಳಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹುಸಿ ಬಾಂಬ್​ ಬೆದರಿಕೆ ಬಂದಿತ್ತು.

Advertisement
Tags :
Advertisement