For the best experience, open
https://m.newskannada.com
on your mobile browser.
Advertisement

ಸಾತೋಡ್ಡಿ ಜಲಪಾತದಲ್ಲಿ ಜೇನು ದಾಳಿ: ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

ಜಲಪಾತ ವೀಕ್ಷಣೆಗೆ ತೆರಳುವ ಪ್ರವಾಸಿಗರ ಮೇಲೆ ನಿರಂತರ ಜೇನು ದಾಳಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಪ್ರಸಿದ್ಧ ಸಾತೊಡ್ಡಿ ಜಲಪಾತಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
05:57 PM Apr 14, 2024 IST | Chaitra Kulal
ಸಾತೋಡ್ಡಿ ಜಲಪಾತದಲ್ಲಿ ಜೇನು ದಾಳಿ  ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

ಕಾರವಾರ: ಜಲಪಾತ ವೀಕ್ಷಣೆಗೆ ತೆರಳುವ ಪ್ರವಾಸಿಗರ ಮೇಲೆ ನಿರಂತರ ಜೇನು ದಾಳಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಪ್ರಸಿದ್ಧ ಸಾತೊಡ್ಡಿ ಜಲಪಾತಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

Advertisement

ಕಳೆದ ಎರಡು ದಿನಗಳಲ್ಲಿ 30ಕ್ಕೂ ಅಧಿಕ ಪ್ರವಾಸಿಗರಿಗೆ ಜೇನು ದಾಳಿ ಮಾಡಿದೆ. ಇಂದು ಜೇನು ಕಡಿತಕ್ಕೆ ಒಳಗಾಗಿ ಗಂಭೀರ ಗಾಯಗೊಂಡಿದ್ದ ನಾಲ್ವರು ಪ್ರವಾಸಿಗರಿಗೆ ಹುಬ್ಬಳ್ಳಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಬೇಸಿಗೆ ರಜೆ ಹಿನ್ನೆಲೆಯಲ್ಲಿ ನೀರಲ್ಲಿ ಆಟವಾಡಲು ಸಾತೊಡ್ಡಿ ಫಾಲ್ಸ್‌ಗೆ ಹೆಚ್ಚು ಪ್ರವಾಸಿಗರು ಭೇಟಿ ನೀಡುತಿದ್ದು, ಜಲಪಾತದ ಬಳಿಯೇ ಪ್ರವಾಸಿಗರ ಮೇಲೆ ಜೇನುಹುಳಗಳು ನಿರಂತರ ದಾಳಿ ಮಾಡುತ್ತಿದೆ.

Advertisement

ಜೇನುಹುಳುಗಳ ದಾಳಿ ಹಿನ್ನೆಲೆ ಜಲಪಾತ ವೀಕ್ಷಣೆಗೆ ಅರಣ್ಯ ಇಲಾಖೆ ನಿರ್ಬಂಧ ಹೇರಿ ಬಿಸಗೋಡ ಕ್ರಾಸ್‌ನಲ್ಲಿ ಬ್ಯಾನರ್ ಅಳವಡಿಸಿ ಪ್ರವಾಸಿಗರಿಗೆ ಸೂಚನೆ ನೀಡಿದ್ದಾರೆ.

Advertisement
Tags :
Advertisement