For the best experience, open
https://m.newskannada.com
on your mobile browser.
Advertisement

ಕಲ್ಲಂಗಡಿ ಬೀಜದ ಪ್ರಯೋಜನಗಳ ಬಗ್ಗೆ ನಿಮಗೆಷ್ಟು ಗೊತ್ತಾ?

ರಸಭರಿತ ಹಣ್ಣು ಎಂದಾಕ್ಷಣ ನೆನಪಿಗೆ ಬರುವ ಮೊದಲ ಹಣ್ಣು ಎಂದರೆ, ಅದು ಕಲ್ಲಂಗಡಿ ಹಣ್ಣು
05:03 PM Dec 27, 2023 IST | Ramya Bolantoor
ಕಲ್ಲಂಗಡಿ ಬೀಜದ ಪ್ರಯೋಜನಗಳ ಬಗ್ಗೆ ನಿಮಗೆಷ್ಟು ಗೊತ್ತಾ

ರಸಭರಿತ ಹಣ್ಣು ಎಂದಾಕ್ಷಣ ನೆನಪಿಗೆ ಬರುವ ಮೊದಲ ಹಣ್ಣು ಎಂದರೆ, ಅದು ಕಲ್ಲಂಗಡಿ ಹಣ್ಣು. ಇದು ಹೈಡ್ರೇಟಿಂಗ್ ಹಣ್ಣಾಗಿದ್ದು, ಇದು ಸುಮಾರು 92 ಪ್ರತಿಶತದಷ್ಟು ನೀರನ್ನು ಹೊಂದಿರುತ್ತದೆ. ಈ ಹಣ್ಣು ಹೆಚ್ಚು ಸಿಹಿಯಾಗಿರುವುದರ ಜತೆಗೆ ಆಂಟಿ ಆಕ್ಸಿಡೆಂಟ್​ಗಳನ್ನು ಹೊಂದಿರುತ್ತದೆ. ಜತೆಗೆ ಜೀವಸತ್ವಗಳು, ಖನಿಜಗಳು ಮತ್ತು ಇತರ ಪೋಷಕಾಂಶಗಳನ್ನು ಒಳಗೊಂಡಿರುತ್ತದೆ. ಇದರ ಬೀಜಗಳಿಂದ ಆರೋಗ್ಯಕ್ಕೆ ಸಿಕ್ಕಾಪಟ್ಟೆ ಲಾಭಗಳಿವೆ. ಈ ಬೀಜಗಳನ್ನು ಸೇವಿಸುವುದರಿಂದ ಎಷ್ಟೆಲ್ಲಾ ಆರೋಗ್ಯಕ್ಕೆ ಲಾಭಗಳಿವೆ ಎಂದು ತಿಳಿಯೋಣ..

Advertisement

ಕಲ್ಲಂಗಡಿ ಬೀಜದಲ್ಲಿರುವ ಪ್ರೋಟೀನ್, ಕಬ್ಬಿಣ, ಮೆಗ್ನೀಸಿಯಮ್ ಮತ್ತು ಸತುವು ನಿಮ್ಮ ಕೂದಲಿಗೆ ಕೆಲವು ಪ್ರಮುಖ ಪೋಷಕಾಂಶಗಳಾಗಿವೆ. ನಿಮ್ಮ ಕೂದಲಿಗೆ ನಿಯಮಿತವಾಗಿ ಅವುಗಳನ್ನು ಹಚ್ಚುವುದರಿಂದ ನಿಮ್ಮ ಕೂದಲಿಗೆ ಸಂಪೂರ್ಣ ಪ್ರಯೋಜನಗಳನ್ನು ಪಡೆಯಬಹುದು. ಕೂದಲು ತೆಳುವಾಗುವುದು ಮತ್ತು ಕೂದಲು ಉದುರುವಿಕೆಯ ಸಮಸ್ಯೆಗೆ ಪರಿಹಾರ ನೀಡುವುದು.

ಕಲ್ಲಂಗಡಿ ಬೀಜಗಳು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡುತ್ತದೆ. ಇದು ದೇಹದಲ್ಲಿ ಇನ್ಸುಲಿನ್ ಪ್ರತಿರೋಧವನ್ನು ಕಡಿಮೆ ಮಾಡಲು ಸಹಕರಿಸುತ್ತವೆ. ಹಾಗಾಗಿ ಮಧುಮೇಹಿಗಳಿಗೆ ಇದು ಬಹಳ ಒಳ್ಳೆಯದು.

Advertisement

ಹುರಿದ ಕಲ್ಲಂಗಡಿ ಬೀಜಗಳನ್ನು ತಿನ್ನುವುದು ನಿಮ್ಮ ಚರ್ಮಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ಮೊಡವೆಗಳನ್ನು ತಡೆಯುತ್ತದೆ, ಚರ್ಮವನ್ನು ತೇವಾಂಶದಿಂದಿರುವಂತೆ ಮಾಡುತ್ತದೆ. ವಯಸ್ಸಾದ ಆರಂಭಿಕ ಚಿಹ್ನೆಗಳಾದ ನೆರಿಗೆ, ಚರ್ಮ ಸುಕ್ಕುಗಟ್ಟುವುದನ್ನು ತಡೆಯುತ್ತದೆ.

ಕಲ್ಲಂಗಡಿ ಬೀಜಗಳನ್ನು ತಿನ್ನುವುದರಿಂದ ಪುರುಷರಲ್ಲಿ ವೀರ್ಯದ ಸಂಖ್ಯೆ ಹೆಚ್ಚುತ್ತದೆ. ಕಲ್ಲಂಗಡಿ ಸಿಟ್ರುಲಿನ್ ಅನ್ನು ಹೊಂದಿರುತ್ತದೆ, ಇದು ಅರ್ಜಿನೈನ್ ಆಗಿ ಬದಲಾಗುತ್ತದೆ. ಉತ್ತಮ ರಕ್ತದ ಹರಿವನ್ನು ಉತ್ತೇಜಿಸಲು ರಕ್ತನಾಳಗಳನ್ನು ಹಿಗ್ಗಿಸಲು ಈ ಅಂಶವು ಕಾರಣವಾಗಿದೆ.

Advertisement
Tags :
Advertisement