ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮೊಬೈಲ್​ ನೋಡುತ್ತಿದ್ದ ಪತ್ನಿ ಮೇಲೆ ಗುಂಡು ಹಾರಿಸಿದ ಪತಿ: ವಿಡಿಯೋ ವೈರಲ್

ಪತಿಯೋರ್ವ ಅಂಗಡಿಯಲ್ಲಿ ಕುಳಿತ್ತಿದ್ದ ಪತ್ನಿಗೆ ಗುಂಡು ಹಾರಿಸಿ ಹತ್ಯೆಗೈದ ಘಟನೆ ಫಲೋಡಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಪತ್ನಿಯನ್ನು ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
06:26 PM Feb 26, 2024 IST | Ashitha S

ರಾಜಸ್ಥಾನ: ಪತಿಯೋರ್ವ ಅಂಗಡಿಯಲ್ಲಿ ಕುಳಿತ್ತಿದ್ದ ಪತ್ನಿಗೆ ಗುಂಡು ಹಾರಿಸಿ ಹತ್ಯೆಗೈದ ಘಟನೆ ಫಲೋಡಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಪತ್ನಿಯನ್ನು ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Advertisement

ಪತಿ ಮಹಿರಾಮ್​ ತನ್ನ ಪತ್ನಿಯ ಮೇಲೆ ಗುಂಡು ಹಾರಿಸಿದ ಆರೋಪಿ. ಈತನಿಗೆ ಮತ್ತು ಪತ್ನಿಗೆ ಎರಡು ವರ್ಷಗಳ ಹಿಂದೆ ಜಗಳ ನಡೆದಿತ್ತು. ಹಾಗಾಗಿ ಇಬ್ಬರು ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಆದರೆ ನಾಗೌರ್​ ರಸ್ತೆಯಲ್ಲಿರುವ ಪತ್ನಿಯ ಅಂಗಡಿಗೆ ಬಂದ ಮಹಿರಾಮ್ ಮೊದಲಿಗೆ ಜಗಳ ಮಾಡಿ​ ತನ್ನ ಕೈಯಲ್ಲಿದ್ದ ಗನ್​ನಿಂದ ಆಕೆಗೆ ಶೂಟ್​​ ಮಾಡಿದ್ದಾನೆ.

ಪತ್ನಿಗೆ ಗುಂಡು ಹಾರಿಸಿದ ಬಳಿಕ ಮಹಿರಾಮ್​ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಇದನ್ನು ಕಂಡ ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಆಕೆ ಸಾವನ್ನಪ್ಪಿದ್ದಾಳೆ.

Advertisement

ಇನ್ನು ಪತ್ನಿಯನ್ನು ಕೊಂದ ಪತಿ ಮಹಿರಾಮ್​ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Advertisement
Tags :
crimedeathFIREgoes viralhusbandindiaLatestNewsNewsKannadaPOLICESHOOT
Advertisement
Next Article