ಕರ್ನಾಟಕ1 | ಬೆಂಗಳೂರು-ಮೈಸೂರು-ಮಲೆನಾಡು-ಬೆಳಗಾವಿ-ಕರಾವಳಿ-ಕಲಬುರಗಿ-
ಹೊರನಾಡ ಕನ್ನಡಿಗರು1
ದೇಶ-ವಿದೇಶ-1 | ದೇಶ-1
ವಿಶೇಷ-
ವಿಜ್ಞಾನ/ತಂತ್ರಜ್ಞಾನ | ಸಾಂಡಲ್ ವುಡ್
ಮನರಂಜನೆ-ಕ್ರೀಡೆ-1ಕ್ಯಾಂಪಸ್-1
ಇತರೆ- | ಆರೋಗ್ಯ-ಅಡುಗೆ ಮನೆ-ಸಮುದಾಯ-ಕ್ರೈಮ್-ಶಿಕ್ಷಣ-ವಿಡಿಯೊ-ಪಾಡ್‌ಕಾಸ್ಟ್‌-ಉದ್ಯೋಗ-
Advertisement

ದಂಪತಿ ಜಗಳ ಠಾಣೆಯಲ್ಲಿ ಇತ್ಯರ್ಥ: ವಾಪಾಸ್ ಬರುವಾಗ ವಾರಾಹಿ ಹೊಳೆಗೆ ಹಾರಿದ ಪತಿ

ಕುಂದಾಪುರ ತಾಲೂಕಿನ ಕಂಡೂರಿನಲ್ಲಿ ಗಂಡ ಹೆಂಡತಿ ಪರಸ್ಪರ ಜಗಳ ಮಾಡಿಕೊಂಡ ಪ್ರಕರಣ ಪೊಲೀಸ್‌ ಠಾಣೆಯ ಮೆಟ್ಟಿಲೇರಿ ಬಳಿಕ ಪತಿ ಹೊಳೆಗೆ ಹಾರಿ ಆತ್ಮಹತ್ಯೆ ಯತ್ನಿಸಿ ನಾಪತ್ತೆಯಲ್ಲಿ ಅಂತ್ಯಗೊಂಡಿದೆ.
09:03 PM Jul 16, 2024 IST | Ashitha S

ಉಡುಪಿ: ಕುಂದಾಪುರ ತಾಲೂಕಿನ ಕಂಡೂರಿನಲ್ಲಿ ಗಂಡ ಹೆಂಡತಿ ಪರಸ್ಪರ ಜಗಳ ಮಾಡಿಕೊಂಡ ಪ್ರಕರಣ ಪೊಲೀಸ್‌ ಠಾಣೆಯ ಮೆಟ್ಟಿಲೇರಿ ಬಳಿಕ ಪತಿ ಹೊಳೆಗೆ ಹಾರಿ ಆತ್ಮಹತ್ಯೆ ಯತ್ನಿಸಿ ನಾಪತ್ತೆಯಲ್ಲಿ ಅಂತ್ಯಗೊಂಡಿದೆ.

Advertisement

ಹೊಳೆಗೆ ಹಾರಿದ ವ್ಯಕ್ತಿಯನ್ನು ಕಾಳಾವರ ಗ್ರಾಮದ ಅಂಗನವಾಡಿ ಸಮೀಪ ನಿವಾಸಿ ಹರೀಶ್ ಭೋವಿ (40) ಎಂದು ಗುರುತಿಸಲಾಗಿದೆ. ಹರೀಶ್‌ ವೃತ್ತಿಯಲ್ಲಿ ಛಾಯಾಗ್ರಾಹಕರಾಗಿದ್ದರು. ಪ್ರೀತಿಸಿ ಮದುವೆಯಾಗಿದ್ದರು. ಆಗಾಗ ಮನೆಯಲ್ಲಿ ಪತ್ನಿಯೊಂದಿಗೆ ಜಗಳವಾಡುತ್ತಿದ್ದರು. ಮಂಗಳವಾರ ಬೆಳಿಗ್ಗೆ ಜಗಳ ತಾರಕಕ್ಕೇರಿ ಮಕ್ಕಳನ್ನು ಬಾವಿಗೆ ದೂಡಲೆತ್ನಿಸಿದ್ದರು ಎನ್ನಲಾಗಿದೆ.

ಇದರಿಂದ ಆತಂಕಗೊಂಡ ಪತ್ನಿ ಕಂಡೂರು ಠಾಣೆಗೆ ದೂರು ನೀಡಿದ್ದರು. ಪೊಲೀಸರು ಗಂಡ ಹೆಂಡತಿಯನ್ನು ಠಾಣೆಗೆ ಕರೆಯಿಸಿ ಪಂಚಾಯಿತಿ ಮಾಡಿ ಆಟೋದಲ್ಲಿ ಕಳುಹಿಸಿದ್ದರು. ಠಾಣೆಯಿಂದ ಬರುತ್ತಿದ್ದ ವೇಳೆ ಕಂಡೂರು ಸೇತುವೆ ಸಮೀಪ ಆಟೋ ಚಾಲಕನಿಗೆ ರಿಕ್ಷಾ ನಿಧಾನಿಸುವಂತೆ ತಿಳಿಸಿದ ಹರೀಶ್ ವಾರಾಹಿ ಹೊಳೆಗೆ ಸೇತುವೆಯಿಂದ ಹಾರಿದ್ದಾರೆ. ಮಾಹಿತಿ ಸಿಕ್ಕಿದ ತಕ್ಷಣ ಸ್ಥಳಕ್ಕಾಗಮಿಸಿದ ಸ್ಥಳೀಯರು, ಪೊಲೀಸರು, ಅಗ್ನಿಶಾಮಕದಳ, ಮುಳುಗುತಜ್ಞರು ಹರೀಶ್ ಪತ್ತೆಗೆ ಶೋಧ ಕಾರ್ಯದಲ್ಲಿ ತೊಡಗಿದರು. ಆದರೆ ವಿಪರೀತ ಮಳೆ, ಉಕ್ಕಿ ಹರಿಯುತ್ತಿರುವ ನದಿ ನೀರಿನಲ್ಲಿ ಪತ್ತೆ ಕಾರ್ಯ ಸಫಲವಾಗಿಲ್ಲ. ಹರೀಶ್ ಗೆ ಇಬ್ಬರು ಹೆಣ್ಣುಮಕ್ಕಳಿದ್ದು, ಹಿರಿಯ ಮಗಳು ಮೂರನೇ ತರಗತಿ ಹಾಗೂ ಕಿರಿಯ ಮಗಳು ಅಂಗನವಾಡಿಗೆ ಹೋಗುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಂಡೂರು ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದ್ದು ಶೋಧ ಕಾರ್ಯ ಮುಂದುವರೆದಿದೆ.

Advertisement

Advertisement
Tags :
casedeathdupifamilyLATEST NEWSNews KarnatakaTODAY
Advertisement
Next Article