ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮೂರನೇ ಮಹಡಿಯಿಂದ ಪತ್ನಿಯನ್ನು ತಳ್ಳಿ ಕೊಲೆ ಮಾಡಿದ ಪತಿ ಅರೆಸ್ಟ್

ಪತಿ ಪತ್ನಿ ನಡುವಿನ ಜಗಳ ಪತ್ನಿಯ ಸಾವಿನಲ್ಲಿ ಕೊನೆಯಾಗಿದೆ. ಜಗಳದ ವೇಳೆ ಕೋಪದಿಂದ ಪತಿಯೊಬ್ಬ ಪತ್ನಿಯನ್ನು 3ನೇ ಮಹಡಿಯಿಂದ ಕೆಳಗೆ ತಳ್ಳಿರುವ ಘಟನೆ ಗಾಜಿಯಾಬಾದ್​ನಲ್ಲಿ ಗೋವಿಂದಪುರಂ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಘಟನೆ ಸಂಭವಿಸಿದೆ.
11:14 AM Jan 28, 2024 IST | Gayathri SG

ಗಾಜಿಯಾಬಾದ್: ಪತಿ ಪತ್ನಿ ನಡುವಿನ ಜಗಳ ಪತ್ನಿಯ ಸಾವಿನಲ್ಲಿ ಕೊನೆಯಾಗಿದೆ. ಜಗಳದ ವೇಳೆ ಕೋಪದಿಂದ ಪತಿಯೊಬ್ಬ ಪತ್ನಿಯನ್ನು 3ನೇ ಮಹಡಿಯಿಂದ ಕೆಳಗೆ ತಳ್ಳಿರುವ ಘಟನೆ ಗಾಜಿಯಾಬಾದ್​ನಲ್ಲಿ ಗೋವಿಂದಪುರಂ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಘಟನೆ ಸಂಭವಿಸಿದೆ.

Advertisement

ಈ ವೇಳೆ ಮಹಿಳೆ ಸಾವನ್ನಪ್ಪಿದ್ದು, ಆರೋಪಿ ವಿಕಾಸ್​ ಕುಮಾರ್​ನನ್ನು ಪೊಲೀಸರು ಬಂಧಿಸಿದ್ದಾರೆ. ಮದ್ಯದ ಅಮಲಿನಲ್ಲಿ ಮನೆಗೆ ಬಂದಿದ್ದ ಪತಿ, 30 ರ ಹರೆಯದ ಅವರ ಪತ್ನಿ ಜತೆಗೆ ತೀವ್ರ ಜಗಳವಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆಕೆಯನ್ನು ಮೂರನೇ ಮಹಡಿಯಿಂದ ಎಸೆದ ನಂತರ, ಆತನೇ ಪತ್ನಿಯನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದನು, ಅಲ್ಲಿ ವೈದ್ಯರು ಆಕೆ ಸತ್ತಿದ್ದಾಳೆ ಎಂದು ಹೇಳಿದ್ದಾರೆ.

Advertisement

ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಅವರನ್ನು ಶನಿವಾರ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Tags :
LatestNewsNewsKannadaಗಾಜಿಯಾಬಾದ್‌ಪತಿ
Advertisement
Next Article