For the best experience, open
https://m.newskannada.com
on your mobile browser.
Advertisement

ನಾನೆಲ್ಲೂ ಓಡಿ ಹೋಗಿಲ್ಲ, ತನಿಖೆ ನಡೆಸಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಿ: ಎಚ್.ಡಿ. ರೇವಣ್ಣ

ಈ ಪ್ರಕರಣದಲ್ಲಿ ಕೇಳಿಬಂದಿರುವ ಆರೋಪಗಳನ್ನು ರಾಜಕೀಯ ಪ್ರೇರಿತ ಎಂದು ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ, ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. 
03:01 PM Apr 29, 2024 IST | Ashika S
ನಾನೆಲ್ಲೂ ಓಡಿ ಹೋಗಿಲ್ಲ  ತನಿಖೆ ನಡೆಸಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಿ  ಎಚ್ ಡಿ  ರೇವಣ್ಣ

ಬೆಂಗಳೂರು: ಈ ಪ್ರಕರಣದಲ್ಲಿ ಕೇಳಿಬಂದಿರುವ ಆರೋಪಗಳನ್ನು ರಾಜಕೀಯ ಪ್ರೇರಿತ ಎಂದು ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ, ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.

Advertisement

ತಮ್ಮ ಮಗ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಎಚ್ ಡಿ ರೇವಣ್ಣ, ಆತ ಎಲ್ಲೋ ಹೋಗಿರಬಹುದು. ಆದರೆ ವಿಚಾರಣೆಗೆ ಕರೆದರೆ ಬರುತ್ತಾನೆ ಎಂದು ಮಾಜಿ ಸಚಿವರೂ ಆದ ರೇವಣ್ಣ ಸ್ಪಷ್ಟಪಡಿಸಿದ್ದಾರೆ.

ಇದೆಲ್ಲಾ ರಾಜಕೀಯ. ಸರ್ಕಾರ ಅವರದ್ದಿದೆ, ಏನು ಬೇಕಾದರೂ ಮಾಡಲಿ. ತನಿಖೆ ನಡೆಸಿ ಕಾನೂನಿನ ರೀತಿ ಏನಿದೆ ಅದಾಗಲಿ. ದೆವೇಗೌಡರ ಕುಟುಂಬದ ಮೇಲೆ ಆರೋಪ ಇವೇನೂ ಹೊಸದಲ್ಲ. ಮೊದಲಿಂದಲೂ ಇಂಥವನ್ನು ಎದುರಿಸಿದ್ದೇವೆ. ದೇವೇಗೌಡರ ಕುಟುಂಬದ ಮೇಲೆ ಲೋಕಾಯುಕ್ತ, ಸಿಐಡಿ ತನಿಖೆ ಇವೆಲ್ಲವನ್ನೂ ಎದುರಿಸಿದ್ದೇವೆ ಎಂದು  ಅವರು ತಿಳಿಸಿದ್ದಾರೆ.

Advertisement

‘ನಾನೆಲ್ಲೂ ಓಡಿ ಹೋಗಿಲ್ಲ, ತನಿಖೆ ನಡೆಸಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಿ. ನಾವು ಕಾನೂನು ರೀತಿ ಈ ಪ್ರಕರಣವನ್ನು ಎದುರಿಸುತ್ತೇವೆ. ಪ್ರಜ್ವಲ್ ಹೋಗಬೇಕಿತ್ತು ಹೋಗಿದಾನೆ. ಕರೆದರೆ ಬರುತ್ತಾನೆ. ತನಿಖೆಗೆ ಕರೆದಾಗ ಪ್ರಜ್ವಲ್ ಬರ್ತಾನೆ’ ಎಂದು ಎಚ್.ಡಿ. ರೇವಣ್ಣ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣರ ಲೈಂಗಿಕ ದೌರ್ಜನ್ಯದ ಹಲವು ವಿಡಿಯೋಗಳಿದ್ದ ಪೆನ್ ಡ್ರೈವ್ ಪ್ರಕರಣ ಬೆಳಕಿಗೆ ಬಂದಿತ್ತು. ನೂರಾರು ಮಹಿಳೆಯರ ಜೊತೆ ಪ್ರಜ್ವಲ್ ರಾಸಲೀಲೆ ನಡೆಸಿದ ವಿಡಿಯೋಗಳು ಹೊರಬಂದಿದ್ದವು.

Advertisement
Tags :
Advertisement