ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸಿಂಹಳೀಯರಿಗೆ ಬಿಗ್ ರಿಲೀಫ್: ಶ್ರೀಲಂಕಾ ಕ್ರಿಕೆಟ್ ಮೇಲಿನ ನಿಷೇಧ ಹಿಂಪಡೆದ ಐಸಿಸಿ

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಶ್ರೀಲಂಕಾ ಕ್ರಿಕೆಟ್ ಮಂಡಳಿಗೆ ಬಿಗ್ ರಿಲೀಫ್ ನೀಡಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಲಂಕಾ ಕ್ರಿಕೆಟ್ ಮಂಡಳಿಯ ಮೇಲೆ ಹೇರಿದ್ದ ನಿಷೇಧವನ್ನು ಐಸಿಸಿ ಹಿಂಪಡೆದಿದೆ. ವಾಸ್ತವವಾಗಿ ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್​ನಲ್ಲಿ ಶ್ರೀಲಂಕಾ ತಂಡದ ಪ್ರದರ್ಶನ ತೀರ ಕಳಪೆಯಾಗಿತ್ತು.
04:31 PM Jan 29, 2024 IST | Ashitha S

ಶ್ರೀಲಂಕಾ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಶ್ರೀಲಂಕಾ ಕ್ರಿಕೆಟ್ ಮಂಡಳಿಗೆ ಬಿಗ್ ರಿಲೀಫ್ ನೀಡಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಲಂಕಾ ಕ್ರಿಕೆಟ್ ಮಂಡಳಿಯ ಮೇಲೆ ಹೇರಿದ್ದ ನಿಷೇಧವನ್ನು ಐಸಿಸಿ ಹಿಂಪಡೆದಿದೆ. ವಾಸ್ತವವಾಗಿ ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್​ನಲ್ಲಿ ಶ್ರೀಲಂಕಾ ತಂಡದ ಪ್ರದರ್ಶನ ತೀರ ಕಳಪೆಯಾಗಿತ್ತು.

Advertisement

ಅಲ್ಲದೆ ಈ ಟೂರ್ನಿಗೂ ಮುನ್ನ ನಡೆದ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ತಂಡ ತನ್ನ ತವರು ಮೈದಾನದಲ್ಲೇ ಭಾರತದ ವಿರುದ್ಧ ಕೇವಲ 50 ರನ್​ಗಳಿಗೆ ಆಲೌಟ್ ಆಗಿತ್ತು. ತಂಡದ ಕಳಪೆ ಪ್ರದರ್ಶನದಿಂದಾಗಿ ಲಂಕಾ ಕ್ರಿಕೆಟ್ ಮಂಡಳಿಯಲ್ಲಿ ಸಾಕಷ್ಟು ಗೊಂದಲ ಸೃಷ್ಟಿಯಾಗಿತ್ತು. ಇದಾದ ನಂತರ ಲಂಕಾ ಕ್ರಿಕೆಟ್​ ಮಂಡಳಿಯನ್ನು ವಜಾಗೊಳಿಸಿ ಶ್ರೀಲಂಕಾ ಸರ್ಕಾರ ಆದೇಶ ಹೊರಡಿಸಿತ್ತು.

ಕ್ರಿಕೆಟ್ ಮಂಡಳಿಯಲ್ಲಿ ಸರ್ಕಾರದ ಹಸ್ತಕ್ಷೇಪವನ್ನು ಒಪ್ಪದ ಐಸಿಸಿ, ಇದು ಐಸಿಸಿ ನಿಯಮಗಳಿಗೆ ವಿರುದ್ಧವಾಗಿದೆ ಎಂಬ ತೀರ್ಮಾನಕ್ಕೆ ಬಂದು ಲಂಕಾ ಮಂಡಳಿಯ ಮೇಲೆ ನಿಷೇಧದ ಶಿಕ್ಷೆ ವಿಧಿಸಿತ್ತು.

Advertisement

ಶ್ರೀಲಂಕಾ ಕ್ರಿಕೆಟ್ ಮಂಡಳಿಯಲ್ಲಿ ಸರ್ಕಾರದ ಹಸ್ತಕ್ಷೇಪವನ್ನು ಗಮನಿಸಿದ ಐಸಿಸಿ, ಸರ್ಕಾರದ ನಡೆಗೆ ಸಾಕಷ್ಟು ಅಸಮಾಧಾನ ವ್ಯಕ್ತಪಡಿಸಿತ್ತು. ಇದಾದ ಬಳಿಕ ಐಸಿಸಿ ಮಹತ್ವದ ನಿರ್ಧಾರ ಕೈಗೊಂಡು ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನು ನಿಷೇಧಿಸಿತ್ತು.

ಶ್ರೀಲಂಕಾ ಕ್ರಿಕೆಟ್ ದ್ವಿಪಕ್ಷೀಯ ಸರಣಿಗಳು ಮತ್ತು ಐಸಿಸಿ ಈವೆಂಟ್‌ಗಳಲ್ಲಿ ಆಡುವುದನ್ನು ಮುಂದುವರಿಸಲು ಅನುಮತಿ ನೀಡಿದ ಐಸಿಸಿ, ಮಂಡಳಿಗೆ ಯಾವುದೇ ಪ್ರಮುಖ ಪಂದ್ಯಾವಳಿಯನ್ನು ಆಯೋಜಿಸದಂತೆ ನಿರ್ಬಂಧ ಹೇರಿ ತೀರ್ಮಾನ ಕೈಗೊಂಡಿತ್ತು. ಇದೀಗ ಶ್ರೀಲಂಕಾ ಕ್ರಿಕೆಟ್ ಮಂಡಳಿಯಲ್ಲಿ ಐಸಿಸಿ, ಮೇಲ್ವಿಚಾರಣೆ ನಡೆಸಿದ್ದು, ಇನ್ನು ಮುಂದೆ ಶ್ರೀಲಂಕಾ ಕ್ರಿಕೆಟ್ ಮಂಡಳಿಯು ಜವಾಬ್ದಾರಿಯುತವಾಗಿ ನಡೆದುಕೊಳ್ಳುವುದಾಗಿಯೂ ಹಾಗೂ ಐಸಿಸಿ ನಿಯಮಗಳನ್ನು ಪಾಲಿಸುವುದಾಗಿಯೂ ಒಪ್ಪಿಕೊಂಡಿದೆ ಎಂಬುದನ್ನು ಗಣನೆಗೆ ತೆಗೆದುಕೊಂಡು ಶ್ರೀಲಂಕಾ ಕ್ರಿಕೆಟ್ ಮಂಡಳಿ ಮೇಲೆ ಹೇರಿದ್ದ ನಿಷೇಧವನ್ನು ತೆಗೆದುಹಾಕಲು ನಿರ್ಧರಿಸಿದೆ.

 

Advertisement
Tags :
indiaLatestNewsNewsKannadaಬಿಗ್ ರಿಲೀಫ್ಬೆಂಗಳೂರುಶ್ರೀಲಂಕಾ
Advertisement
Next Article