For the best experience, open
https://m.newskannada.com
on your mobile browser.
Advertisement

ಟಿ20 ವಿಶ್ವಕಪ್‌: ಅ.6ರಂದು ಭಾರತ-ಪಾಕಿಸ್ತಾನ ಫೈಟ್‌

ಜೂನ್‌ನಲ್ಲಿ ವೆಸ್ಟ್‌ ಇಂಡೀಸ್ ಹಾಗೂ ಅಮೆರಿಕದ ಅತಿಥ್ಯದಲ್ಲಿ ಪುರುಷರ ಟಿ20 ವಿಶ್ವಕಪ್‌ ನಡೆಯುತ್ತಿದೆ. ಈ ಟೂರ್ನಿಯ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈಗ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ ವೇಳಾ ಪಟ್ಟಿಯನ್ನು ಸಹ ಬಿಡುಗಡೆ ಮಾಡಿದೆ. ಹೌದು. .
03:53 PM May 05, 2024 IST | Ashitha S
ಟಿ20 ವಿಶ್ವಕಪ್‌  ಅ 6ರಂದು ಭಾರತ ಪಾಕಿಸ್ತಾನ ಫೈಟ್‌

ಅಮೆರಿಕ: ಜೂನ್‌ನಲ್ಲಿ ವೆಸ್ಟ್‌ ಇಂಡೀಸ್ ಹಾಗೂ ಅಮೆರಿಕದ ಅತಿಥ್ಯದಲ್ಲಿ ಪುರುಷರ ಟಿ20 ವಿಶ್ವಕಪ್‌ ನಡೆಯುತ್ತಿದೆ. ಈ ಟೂರ್ನಿಯ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈಗ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ ವೇಳಾ ಪಟ್ಟಿಯನ್ನು ಸಹ ಬಿಡುಗಡೆ ಮಾಡಿದೆ. ಹೌದು. .

Advertisement

ಮಹಿಳೆಯರ T20 ವಿಶ್ವಕಪ್ 2024 ಅಕ್ಟೋಬರ್ 3 ರಂದು ಆರಂಭವಾಗಲಿದೆ. ಮೊದಲ ಪಂದ್ಯ ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವೆ ಢಾಕಾದಲ್ಲಿ ನಡೆಯಲಿದೆ. ಎಲ್ಲಾ ತಂಡಗಳು ತಮ್ಮ ತಮ್ಮ ಗುಂಪುಗಳಲ್ಲಿ ತಲಾ ನಾಲ್ಕು ಪಂದ್ಯಗಳನ್ನು ಆಡಲಿವೆ. ಈ ಟೂರ್ನಿಯ ಫೈನಲ್‌ ಪಂದ್ಯ ಅಕ್ಟೋಬರ್ 20 ರಂದು ನಡೆಯಲಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. 2024 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಅಕ್ಟೋಬರ್ 6 ರಂದು ನಡೆಯಲಿದೆ. ಇದಾದ ಬಳಿಕ ಟೀಂ ಇಂಡಿಯಾ ಕ್ವಾಲಿಫೈಯರ್ 1ರ ತಂಡವನ್ನು ಎದುರಿಸಲಿದೆ.

Advertisement

ಭಾರತ ಮಹಿಳಾ ಕ್ರಿಕೆಟ್ ತಂಡವು ಅಕ್ಟೋಬರ್ 4 ರಂದು ಮಹಿಳಾ T20 ವಿಶ್ವಕಪ್ 2024 ರಲ್ಲಿ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಟೀಂ ಇಂಡಿಯಾದ ಮೊದಲ ಪಂದ್ಯ ನ್ಯೂಜಿಲೆಂಡ್ ವಿರುದ್ಧ ನಡೆಯಲಿದೆ. ಇದಾದ ನಂತರ ಭಾರತ ತಂಡ ಅಕ್ಟೋಬರ್ 9 ರಂದು ಕ್ವಾಲಿಫೈಯರ್ 1 ರೊಂದಿಗೆ ಸ್ಪರ್ಧಿಸಲಿದೆ.

ಅಕ್ಟೋಬರ್ 13 ರಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಪಂದ್ಯ ನಡೆಯಲಿದೆ. ಅಕ್ಟೋಬರ್ 17 ರಂದು ಮೊದಲ ಸೆಮಿಫೈನಲ್‌ ಮತ್ತು ಎರಡನೇ ಸೆಮಿಫೈನಲ್ ಅಕ್ಟೋಬರ್ 18 ರಂದು ನಡೆಯಲಿದೆ. ಅಕ್ಟೋಬರ್ 20 ರಂದು ಫೈನಲ್ ಪಂದ್ಯ ನಡೆಯಲಿದೆ.

Advertisement
Tags :
Advertisement