ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಐಸಿಸಿ ಟೆಸ್ಟ್ ಶ್ರೇಯಾಂಕ: ವಿಶ್ವದ ನಂ.1 ಬೌಲರ್ ಸ್ಥಾನಕ್ಕೇರಿದ ಜಸ್ಪ್ರೀತ್ ಬುಮ್ರಾ

ಐಸಿಸಿ ಬಿಡುಗಡೆ ಮಾಡಿರುವ ನೂತನ ಟೆಸ್ಟ್ ಶ್ರೇಯಾಂಕದಲ್ಲಿ ಯಾರ್ಕರ್ ಕಿಂಗ್ ಜಸ್ಪ್ರೀತ್ ಬುಮ್ರಾ,  ನಂಬರ್ 1 ಸ್ಥಾನಕ್ಕೇರಿದ್ದಾರೆ.
02:36 PM Feb 07, 2024 IST | Ashika S

ಹೈದರಾಬಾದ್​: ಐಸಿಸಿ ಬಿಡುಗಡೆ ಮಾಡಿರುವ ನೂತನ ಟೆಸ್ಟ್ ಶ್ರೇಯಾಂಕದಲ್ಲಿ ಯಾರ್ಕರ್ ಕಿಂಗ್ ಜಸ್ಪ್ರೀತ್ ಬುಮ್ರಾ,  ನಂಬರ್ 1 ಸ್ಥಾನಕ್ಕೇರಿದ್ದಾರೆ.

Advertisement

ಪ್ರಸ್ತುತ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಬುಮ್ರಾ ಪ್ರದರ್ಶನ ಅದ್ಭುತವಾಗಿದೆ. ಹೈದರಾಬಾದ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ 2 ವಿಕೆಟ್ ಕಬಳಿಸಿದ್ದ ಬುಮ್ರಾ, ಎರಡನೇ ಇನ್ನಿಂಗ್ಸ್​ನಲ್ಲಿ 4 ವಿಕೆಟ್ ಪಡೆದು ಮಿಂಚಿದ್ದರು.

ಹಾಗೆಯೇ ವಿಶಾಖಪಟ್ಟಣಂನಲ್ಲಿ ನಡೆದ ಎರಡನೇ ಟೆಸ್ಟ್​ ಪಂದ್ಯದಲ್ಲೂ ತಮ್ಮ ಅದ್ಭುತ ಫಾರ್ಮ್​ ಮುಂದುವರೆಸಿದ್ದ ಬುಮ್ರಾ ಮೊದಲ ಇನ್ನಿಂಗ್ಸ್​ನಲ್ಲಿ 6 ವಿಕೆಟ್ ಕಬಳಿಸಿದ್ದರೆ, ಎರಡನೇ ಇನ್ನಿಂಗ್ಸ್​ನಲ್ಲಿ 3 ವಿಕೆಟ್ ಪಡೆದು ತಂಡದ ಗೆಲುವಿನ ಪ್ರಮುಖ ರೂವಾರಿ ಎನಿಸಿಕೊಂಡಿದ್ದರು.

Advertisement

ಈ ಅಮೋಘ ಪ್ರದರ್ಶನ ಲಾಭ ಪಡೆದಿರುವ ಬುಮ್ರಾ, ನೂತನ ಟೆಸ್ಟ್ ರ್‍ಯಾಂಕಿಂಗ್​ನಲ್ಲಿ ಮೂರು ಸ್ಥಾನ ಮೇಲೇರಿ 881 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದ್ದಾರೆ.

Advertisement
Tags :
LatetsNewsNewsKannadaಐಸಿಸಿಜಸ್ಪ್ರೀತ್ ಬುಮ್ರಾಬಿಡುಗಡೆಶ್ರೇಯಾಂಕ
Advertisement
Next Article