For the best experience, open
https://m.newskannada.com
on your mobile browser.
Advertisement

ಗೀತಾಕ್ಕ ಗೆದ್ದರೆ ನಾರಾಯಣಗುರು ವಿಚಾರ ಧಾರೆಗಳು ಗೆದ್ದಂತೆ: ನಿಖೇತ್ ರಾಜ್ ಮೌರ್ಯ

ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾಕ್ಕ ಗೆದ್ದರೆ ಸಂವಿಧಾನ, ನಾರಾಯಣ ಗುರುಗಳ ವಿಚಾರಧಾರೆ, ಚಿಂತನೆಗಳು ಗೆದ್ದಂತೆ ಎಂದು ಕೆಪಿಸಿಸಿ ವಕ್ತಾರ ಹಾಗೂ ಚಿಂತಕರೂ ಆದ ನಿಖೇತ್ ರಾಜ್ ಮೌರ್ಯ ಹೇಳಿದರು.
02:36 PM May 01, 2024 IST | Chaitra Kulal
ಗೀತಾಕ್ಕ ಗೆದ್ದರೆ ನಾರಾಯಣಗುರು ವಿಚಾರ ಧಾರೆಗಳು ಗೆದ್ದಂತೆ  ನಿಖೇತ್ ರಾಜ್ ಮೌರ್ಯ

ಉಡುಪಿ: ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾಕ್ಕ ಗೆದ್ದರೆ ಸಂವಿಧಾನ, ನಾರಾಯಣ ಗುರುಗಳ ವಿಚಾರಧಾರೆ, ಚಿಂತನೆಗಳು ಗೆದ್ದಂತೆ ಎಂದು ಕೆಪಿಸಿಸಿ ವಕ್ತಾರ ಹಾಗೂ ಚಿಂತಕರೂ ಆದ ನಿಖೇತ್ ರಾಜ್ ಮೌರ್ಯ ಹೇಳಿದರು.

Advertisement

ಬೈಂದೂರು ತಾಲ್ಲೂಕಿನ ಕಿರಿಮಂಜೇಶ್ವರದಲ್ಲಿ ಆಯೋಜಿಸಿದ್ದ ಗೀತಾ ಶಿವರಾಜಕುಮಾರ ಪರ ಸಾತಯಾಚನೆ ಸಭೆ ಹಾಗೂ ಮಹಿಳಾ ಸಮಾವೇಶ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಇಲ್ಲಿ ಬಸವಣ್ಣ ಹಾಗೂ ಕುವೆಂಪುರವರ ತತ್ವ ಸಿದ್ಧಾಂತಗಳನ್ನು ಜಾಗೃತಗೊಳಿಸಬೇಕಿದೆ. ಅದ್ದರಿಂದ ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಿ ಆಶೀರ್ವದಿಸಬೇಕು ಎಂದು ಕೋರಿದರು.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಶಿಕಾರಿಪುರ ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಡಿಕೆ ಬೆಳೆಗಾರರು ಇದ್ದಾರೆ. ಆದರೆ, ಈ ರೈತರಿಗೆ ನ್ಯಾಯ ಒದಗಿಸಿಕೊಡಲು ಬಿಜೆಪಿ ಸರ್ಕಾರದಿಂದ ಆಗಿಲ್ಲ. ಇಲ್ಲಿ, ವಿದೇಶದಿಂದ ಅಡಿಕೆ ಆಮದಿಗೆ ಬಿಜೆಪಿ ಮುಂದಾಗಿದೆ. ಬೂತಾನ್ ಅಡಿಕೆಗೆ ಮಣೆ ಹಾಕಲಾಗಿದೆ. ಇದರಿಂದ, ರೈತರ ಅಡಿಕೆ ತೋಟಗಳು ಅವನತಿಯ ಹಂತ ತಲುಪಲಿವೆ ಎಂದರು.

Advertisement

ದೇಶದಲ್ಲಿ ಬಿಜೆಪಿ 400 ಸ್ಥಾನ ಪಡೆದರೆ, ಸಂವಿಧಾನ ತಿದ್ದುಪಡಿ ಮಾಡುವುದಾಗಿ ಹೇಳುತ್ತಿದ್ದಾರೆ. ನೆನಪಿರಲಿ, ಇದೇ ಸಂವಿಧಾನದಿಂದ ಬಡವರ ಮಕ್ಕಳು, ಕೂಲಿಕಾರ್ಮಿಕರ ಮಕ್ಕಳು ಸಮಾಜದಲ್ಲಿ ಉನ್ನತ ಸ್ಥಾನ ಪಡೆಯಲು ಅವಕಾಶ ಕಲ್ಪಿಸಿರುವುದು. ಆದರೆ, ಬಿಜೆಪಿಯವರು ಇಂತಹ ಸಂವಿಧಾನವನ್ನು ಅಳಿಸಲು ಮುಂದಾಗಿದ್ದಾರೆ. ಇದಕ್ಕೆ ಅವಕಾಶ ಕಲ್ಪಿಸಿಕೊಡಕೂಡದು ಎಂದು ಹೇಳಿದರು.

ಮತದಾನದ ದಿನ ನೆನಪಾಗಬೇಕಿರುವುದು ದೇಶದಲ್ಲಿ ಪೆಟ್ರೋಲ್, ಡಿಸೇಲ್, ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಸೇರಿದಂತೆ ಮೂಲ ಸೌಕರ್ಯಗಳನ್ನು ಬಿಜೆಪಿ ಆಡಳಿತದಲ್ಲಿ ಕಲ್ಪಿಸದೇ ಇರುವುದು. ಪ್ರಸ್ತುತ ಬಡವರು ಮನೆ ಕಟ್ಟಲು ಬಳಸುವ ಇಟ್ಟಿಗೆ, ಸಿಮೆಂಟ್ ಖರೀದಿಸಲು ಕೂಡ ಸಾಧ್ಯವಾಗುತ್ತಿಲ್ಲ. ಇಂತಹ ಪರಿಸ್ಥಿಗೆ ಬಿಜೆಪಿ ಅಡಳಿತ ದೇಶವನ್ನು ತಂದಿಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಮಾತನಾಡಿ, ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಹೆಣ್ಣುಮಕ್ಕಳಿಗೆ ಸಮಾನತೆ ದೊರಕಿಸಿಕೊಡಲು ಸಾಧ್ಯ. ಬೆಲೆ ಏರಿಕೆಯ ಪರಿಸ್ಥಿತಿ ನಿಭಾಯಿಸಲು ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬರಬೇಕಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರವನ್ನು ಜನ ಸಾಮಾನ್ಯರು ನಂಬಕೂಡದು. ಕ್ಷೇತ್ರದ ರಕ್ಷಣೆಗೆ ನನಗೆ ಮತ ನೀಡಿ ಎಂದು ಕೋರಿದರು.

ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ, ಬಿ.ಎಂ.ಸುಕುಮಾರ್ ಶೆಟ್ಟಿ, ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಡಿ.ಆರ್.ರಾಜು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಜು ಪೂಜಾರಿ, ಬೈಂದೂರು ಚುನಾವಣೆ ಉಸ್ತುವಾರಿ ಜಿ.ಎ.ಭಾವ, ಪ್ರಮುಖರಾದ ಮಹಿಳಾ ಅಧ್ಯಕ್ಷ ಗೌರಿ ದೇವಾಡಿಗ, ಇಂದಿರಾ, ಅರವಿಂದ ಪೂಜಾರಿ,ಮದನ್ ಕುಮಾರ್, ಚಂದ್ರ ಪೂಜಾರಿ, ಶಂಕರ್ ಪೂಜಾರಿ, ಉದಯ ಕುಮಾರ್ ಶೆಟ್ಟಿ ಸೇರಿ ಕಾರ್ಯಕರ್ತರು ಇದ್ದರು.

Advertisement
Tags :
Advertisement