ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹಳೆಯ ಚಾಳಿ ಮುಂದುವರಿಸಿದರೆ ಪಕ್ಷಕ್ಕೆ ಡ್ಯಾಮೇಜ್‌ ಆಗಿಯೇ ಆಗುತ್ತದೆ: ಸದಾನಂದ ಗೌಡ

ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ ಶನಿವಾರ ರಾತ್ರಿ ನಡೆದಿತ್ತು. ಆದರೆ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ 6 ಆಪ್ತರಿಗೆ ಸ್ಥಾನ ನೀಡಲಾಗಿದೆ, ಇದರಿಂದ ಮೊದಲೇ ಗರಂ ಆಗಿದ್ದ ಬಸನಗೌಡ ಪಾಟೀಲ್‌ ಯತ್ನಾಳ್‌ ಸೇರಿದಂತೆ ಹಲವರ ಆಕ್ರೋಶಕ್ಕೆ ಕಾರಣವಾಗಿತ್ತು.
12:04 PM Dec 24, 2023 IST | Ashika S

ಬೆಂಗಳೂರು: ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ ಶನಿವಾರ ರಾತ್ರಿ ನಡೆದಿತ್ತು. ಆದರೆ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ 6 ಆಪ್ತರಿಗೆ ಸ್ಥಾನ ನೀಡಲಾಗಿದೆ, ಇದರಿಂದ ಮೊದಲೇ ಗರಂ ಆಗಿದ್ದ ಬಸನಗೌಡ ಪಾಟೀಲ್‌ ಯತ್ನಾಳ್‌ ಸೇರಿದಂತೆ ಹಲವರ ಆಕ್ರೋಶಕ್ಕೆ ಕಾರಣವಾಗಿತ್ತು.

Advertisement

ಇದೀಗ ಈ ವಿಷಯದ ಕುರಿತು ಮಾಜಿ ಸಿಎಂ ಸದಾನಂದ ಗೌಡ ಕೂಡ ಧ್ವನಿಗೂಡಿಸಿದ್ದಾರೆ. ಈ ತಂಡವನ್ನು ಅಸಮರ್ಥ ತಂಡ ಅಂತಾ ಹೇಳಲ್ಲ. ಆದರೆ ಅಲ್ಲೋ ಇಲ್ಲೋ ಸ್ವಲ್ಪ ವ್ಯತ್ಯಾಸಗಳು ಇವೆ. ಇದನ್ನೆಲ್ಲ ಮಾಡುವ ಮುನ್ನ ಕೇಂದ್ರದ ನಾಯಕರು ಬಂದು ರಾಜ್ಯದ ಹಿರಿಯರ ಜೊತೆ ಕುಳಿತು‌ ತಿಳಿದುಕೊಳ್ಳಬೇಕಿತ್ತು ಎಂದು ಅಸಮಾಧಾನ ಹೊರಹಾಕಿದ್ದಾರೆ.

ದಕ್ಷಿಣ ಭಾಗಕ್ಕೆ ಹೆಚ್ಚು ಆದ್ಯತೆ ಸಿಕ್ಕಿದೆ, ಉತ್ತರ ಭಾಗಕ್ಕೆ ಸರಿಯಾಗಿ ಸಿಕ್ಕಿಲ್ಲ ಎಂಬ ಮಾತುಗಳು ಇವೆ. ಈಗಿನ ಪದಾಧಿಕಾರಿಗಳ ಈ ತಂಡ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋದರೆ ಖಂಡಿತ ಯಶಸ್ವಿಯಾಗುತ್ತದೆ. ಮತ್ತೆ ಏನಾದರೂ ಹಳೆಯ ಚಾಳಿ ಮುಂದುವರಿಸಿದರೆ ಅದು ಪಕ್ಷದ ಮೇಲೆ ಸಮಸ್ಯೆ ಆಗುತ್ತದೆ.

Advertisement

ದೆಹಲಿಯಲ್ಲಿ ಕುಳಿತು ತೀರ್ಮಾನ ಮಾಡುವುದು ಸರಿಯಲ್ಲ. ಕೋರ್ ಕಮಿಟಿ ಎನ್ನುವುದು ಒಂದು ಹಿರಿಯರ ತಂಡ, ಆ ಕೋರ್ ಕಮಿಟಿ ಜೊತೆ ಚರ್ಚಿಸಿ ತೀರ್ಮಾನ ಆಗಿದ್ದರೆ, ಇನ್ನೂ ಸದೃಢವಾದ ಟೀಮ್ ಕಟ್ಟಲು ಸಾಧ್ಯವಾಗಬಹುದಿತ್ತು. ಉತ್ತರ ಕರ್ನಾಟಕ ಭಾಗಕ್ಕೆ ಮತ್ತಷ್ಟು ಒತ್ತು ಕೊಡಬೇಕಿತ್ತು. ಯಾಕೋ ಏನೋ ಗೊತ್ತಿಲ್ಲ, ಹಿರಿಯರ ವೈಫಲ್ಯದಿಂದ ಸೋಲಾಗಿದೆ ಎಂಬ ಭಾವನೆ ವರಿಷ್ಠರಲ್ಲಿದೆ. ದಯವಿಟ್ಟು ಅದನ್ನು ಅಲ್ಲಿಗೆ ಬಿಟ್ಟು ಬಿಡಿ ಎಂದು ಹೇಳಿದ್ದಾರೆ.

Advertisement
Tags :
LatestNewsNewsKannadaಘಟಕಪದಾಧಿಕಾರಿಬಸನಗೌಡ ಪಾಟೀಲ್ ಯತ್ನಾಳ್ಬಿಜೆಪಿಮಾಜಿ ಮುಖ್ಯಮಂತ್ರಿರಾಜ್ಯ
Advertisement
Next Article