For the best experience, open
https://m.newskannada.com
on your mobile browser.
Advertisement

ಹೆಣ್ಣುಕುಲಕ್ಕೆ ಅಗೌರವ ತೋರಿದರೆ ಉದ್ಧಾರ ಆಗ್ತಾರಾ : ಜಗ್ಗೇಶ್

ಅಶ್ವಿನಿ ಪುನೀತ್ ರಾಜ್‌ಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಈಗಾಗಲೇ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆರ್‌ಸಿಬಿ ಸೋಲಿಗೆ ಅಶ್ವಿನಿ ಅವರೇ ಕಾರಣ ಎಂದು ನಿಂದಿಸಿದವರಿಗೆ ನವರಸನಾಯಕ ಜಗ್ಗೇಶ್ ಸಾಮಾಜಿಕ ಜಾಲತಾಣದಲ್ಲಿ ಉತ್ತರ ಕೊಟ್ಟಿದ್ದು, ಹೆಣ್ಣುಕುಲಕ್ಕೆ ಅಗೌರವ ತೋರಿಸಿದರೆ ಉದ್ಧಾರ ಆಗ್ತಾರಾ ಎಂದು ಜಗ್ಗೇಶ್ ಶಾಪ ಹಾಕಿದ್ದಾರೆ.
02:04 PM Apr 07, 2024 IST | Chaitra Kulal
ಹೆಣ್ಣುಕುಲಕ್ಕೆ ಅಗೌರವ ತೋರಿದರೆ ಉದ್ಧಾರ ಆಗ್ತಾರಾ   ಜಗ್ಗೇಶ್

ಅಶ್ವಿನಿ ಪುನೀತ್ ರಾಜ್‌ಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಈಗಾಗಲೇ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆರ್‌ಸಿಬಿ ಸೋಲಿಗೆ ಅಶ್ವಿನಿ ಅವರೇ ಕಾರಣ ಎಂದು ನಿಂದಿಸಿದವರಿಗೆ ನವರಸನಾಯಕ ಜಗ್ಗೇಶ್ ಸಾಮಾಜಿಕ ಜಾಲತಾಣದಲ್ಲಿ ಉತ್ತರ ಕೊಟ್ಟಿದ್ದು, ಹೆಣ್ಣುಕುಲಕ್ಕೆ ಅಗೌರವ ತೋರಿಸಿದರೆ ಉದ್ಧಾರ ಆಗ್ತಾರಾ ಎಂದು ಜಗ್ಗೇಶ್ ಶಾಪ ಹಾಕಿದ್ದಾರೆ.

Advertisement

ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರನ್ನು ಅಣಕಿಸಿದ ನತದೃಷ್ಟರೆ ನಿಮಗೂ ತಾಯಿ ಇರಬೇಕು. ತಾಯಿ ಬೆಲೆ ಗೊತ್ತಿರಬೇಕು. ಒಂದು ವೇಳೆ, ತಾಯಿ ಮತ್ತು ಹೆಣ್ಣಿಗೆ ಗೌರವ ಕೊಡಲ್ಲ ಎಂದರೆ ಖಂಡಿತಾ ಅಂಥವರು ಮನುಕುಲಕ್ಕೆ ಅನರ್ಹ ಎಂದು ಜಗ್ಗೇಶ್ ಅಶ್ವಿನಿ ಪರ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಬೆಂಗಳೂರಿನ ಆರ್‌ಸಿಬಿ ಅನ್‌ಬಾಕ್ಸ್ ಇವೆಂಟ್‌ನಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರನ್ನು ಕರೆದಿದ್ದರು. ಅಶ್ವಿನಿ ಅವರು ಆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಐಪಿಎಲ್ ಪ್ರಾರಂಭವಾಗಿ ಆರ್‌ಸಿಬಿ ತಂಡ ಕೆಲವು ಪಂದ್ಯಗಳಲ್ಲಿ ಸೋತಿದೆ.

Advertisement

ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ಗಜಪಡೆ ಹೆಸರಿನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ, ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಆರ್‌ಸಿಬಿ ಕಾರ್ಯಕ್ರಮಕ್ಕೆ ಬಂದಿದ್ದಕ್ಕೆ ತಂಡ ಸೋತಿದೆ ಎಂದು ಹೇಳಿದೆ. ಅಭಿಮಾನಿಗಳಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ‘ಸುದೀಪ್ ಅಭಿಮಾನಿ’ ಎಂದು ಖಾತೆಯ ಹೆಸರು ಬದಲಿಸಿದ್ದಾರೆ. ಇದರ ವಿರುದ್ಧ ಅಪ್ಪು ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಕಾನೂನು ಸಮರ ಸಾರಿದ್ದು, ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement
Tags :
Advertisement