For the best experience, open
https://m.newskannada.com
on your mobile browser.
Advertisement

ಮಾಧುರಿ ದೀಕ್ಷಿತ್​ಗೆ ವಿಶೇಷ ಜೀವಮಾನ ಸಾಧನೆ ಪ್ರಶಸ್ತಿಯ ಗರಿ

ಗೋವಾ: ಗೋವಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವ 2023ರಲ್ಲಿ ನಟಿ ಮಾಧುರಿ ದೀಕ್ಷಿತ್ ವಿಶೇಷ ಗೌರವಕ್ಕೆ ಆಯ್ಕೆ ಆಗಿದ್ದಾರೆ. ಭಾರತೀಯ ಸಿನಿಮಾಕ್ಕೆ ನೀಡಿರುವ ಸೇವೆಯನ್ನು ಪರಿಗಣಿಸಿ ಮಾಧುರಿ ದೀಕ್ಷಿತ್ ಅವರನ್ನು ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
06:06 PM Nov 21, 2023 IST | Ashitha S
ಮಾಧುರಿ ದೀಕ್ಷಿತ್​ಗೆ ವಿಶೇಷ ಜೀವಮಾನ ಸಾಧನೆ ಪ್ರಶಸ್ತಿಯ ಗರಿ

ಗೋವಾ: ಗೋವಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವ 2023ರಲ್ಲಿ ನಟಿ ಮಾಧುರಿ ದೀಕ್ಷಿತ್ ವಿಶೇಷ ಗೌರವಕ್ಕೆ ಆಯ್ಕೆ ಆಗಿದ್ದಾರೆ. ಭಾರತೀಯ ಸಿನಿಮಾಕ್ಕೆ ನೀಡಿರುವ ಸೇವೆಯನ್ನು ಪರಿಗಣಿಸಿ ಮಾಧುರಿ ದೀಕ್ಷಿತ್ ಅವರನ್ನು ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Advertisement

54ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನಟಿ ಮಾಧುರಿ ಅವರಿಗೆ ವಿಶೇಷ ಗೌರವ ಸಲ್ಲಿಸಲಾಯಿತು. ನಾಲ್ಕು ದಶಕಗಳ ಕಾಲದ ಸಿನಿಮಾ ವೃತ್ತಿಜೀವನದೊಂದಿಗೆ, ಮಾಧುರಿ ದೀಕ್ಷಿತ್ ಭಾರತೀಯ ಚಲನಚಿತ್ರೋದ್ಯಮದಲ್ಲಿ ಮೂಡಿಸಿರುವ ಛಾಪನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.

ಗೋವಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಈ ಪ್ರಶಸ್ತಿಯನ್ನು ನೀಡಿದ್ದು, ಆ ಬಗ್ಗೆ ಅವರು ಸೋಷಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಭಾರತದ 54 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಚಿತ್ರರಂಗದಲ್ಲಿ ಶ್ರೇಷ್ಠತೆಯನ್ನು ನೀಡಿದ ಪ್ರತಿಭಾವಂತ, ವರ್ಚಸ್ವಿ ನಟಿ ಮಾಧುರಿ ಅವರಿಗೆ 'ಭಾರತೀಯ ಸಿನಿಮಾಗೆ ಕೊಡುಗೆಗಾಗಿ ವಿಶೇಷ ಮನ್ನಣೆ' ಪ್ರಶಸ್ತಿ ನೀಡುತ್ತಿರುವುದಕ್ಕೆ ಸಂತೋಷವಿದೆ ಎಂದು ಸಚಿವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Advertisement

Advertisement
Tags :
Advertisement