ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಜ್ಯಾದ್ಯಂತ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ರಾಜ್ಯಾದ್ಯಂತ ನಾಳೆ ಮಾರ್ಚ್ 01ರಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದೆ. 
07:44 AM Feb 29, 2024 IST | Ashika S

ಬೆಂಗಳೂರು: ರಾಜ್ಯಾದ್ಯಂತ ನಾಳೆ ಮಾರ್ಚ್ 01ರಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.

Advertisement

ಈ ಬಾರಿ 6,98,624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. 2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ.

ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಬೆಳಗ್ಗೆ 9.30ರಿಂದ ಮಧ್ಯಾಹ್ನ 2ರವರೆಗೆ ಜೆರಾಕ್ಸ್ ಅಂಗಡಿಗಳು ಬಂದ್ ಆಗಿರಲಿವೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

Advertisement

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ವಿಶೇಷ ಆಫರ್‌ ಘೋಷಿಸಿದೆ. ಪರೀಕ್ಷಾ ಕೇಂದ್ರಕ್ಕೆ ತೆರಳಲು ಹಾಗೂ ಮನೆಗೆ ಹಿಂದಿರುಗಲು ವಿದ್ಯಾರ್ಥಿಗಳಿಗೆ ಉಚಿತ ಬಸ್‌ ವ್ಯವಸ್ಥೆ ಕಲ್ಪಿಸಲಾಗಿದೆ.

ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ. ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯಗೊಳ್ಳಲಿದೆ.

Advertisement
Tags :
2pucBOARD EXAMLatetsNewsNewsKannadaದ್ವಿತೀಯ ಪಿಯುಪರೀಕ್ಷೆ
Advertisement
Next Article