ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಜೀನ್ಸ್ ಪ್ಯಾಂಟ್ , ಟೀ ಶರ್ಟ್‍ಗಳಲ್ಲಿ ಅಕ್ರಮ ಚಿನ್ನ ಸಾಗಾಟ: ನಾಲ್ವರು ವಶಕ್ಕೆ

ಕಸ್ಟಮ್ಸ್ ಅಧಿಕಾರಿಗಳು 1.96 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
12:09 PM May 19, 2024 IST | Chaitra Kulal

ಬೆಂಗಳೂರು:‌ ಕಸ್ಟಮ್ಸ್ ಅಧಿಕಾರಿಗಳು 1.96 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

Advertisement

ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದುಬೈನಿಂದ ಬಂದ ಮೂವರು ಪುರುಷರು ಹಾಗೂ ಓರ್ವ ಮಹಿಳೆಯನ್ನು ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗೆ ಒಳಪಡಿಸಿದಾಗ ಜೀನ್ಸ್ ಪ್ಯಾಂಟ್ ಹಾಗೂ ಟೀ ಶರ್ಟ್‍ಗಳಲ್ಲಿ ಪೇಸ್ಟ್ ರೀತಿ ಚಿನ್ನವನ್ನು ಅಕ್ರಮವಾಗಿ ಅಡಗಿಸಿಟ್ಟುಕೊಂಡಿರುವುದು ಪತ್ತೆಯಾಗಿದೆ.

ನಾಲ್ಕು ಜನ ಪ್ರಯಾಣಿಕರ ಬಳಿ ಬರೋಬ್ಬರಿ 2 ಕೆಜಿ 864 ಗ್ರಾಂ ತೂಕದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಅಧಿಕಾರಿಗಳು ನಾಲ್ವರನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Advertisement

Advertisement
Tags :
BANGALOREcustodyCustoms OfficerIllegal gold trafficLatestNewsNewsKarnataka
Advertisement
Next Article