ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

11 ಜಿಲ್ಲೆಗಳಿಗೆ ಮಳೆ ಅಲರ್ಟ್‌ ನೀಡಿದ ಹವಾಮಾನ ಇಲಾಖೆ

ಕರಾವಳಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಶನಿವಾರ ಮಳೆಯಾಗಿದೆ. ಇನ್ನು ಭಾನುವಾರದ ಮಳೆಯಾಗುವ ಪ್ರದೇಶಗಳ ವಿವರ ಹೀಗಿದೆ.
07:21 AM Dec 10, 2023 IST | Ashika S

ಬೆಂಗಳೂರು: ಕರಾವಳಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಶನಿವಾರ ಮಳೆಯಾಗಿದೆ. ಇನ್ನು ಭಾನುವಾರದ ಮಳೆಯಾಗುವ ಪ್ರದೇಶಗಳ ವಿವರ ಹೀಗಿದೆ.

Advertisement

ದಕ್ಷಿಣ ಒಳನಾಡಿನ ಮೈಸೂರಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದರೆ, ಉಳಿದ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ಹಾವೇರಿ, ಧಾರವಾಡ ಮತ್ತು ಬೆಳಗಾವಿಯಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆ ಸುರಿಯಲಿದೆ. ಬೆಂಗಳೂರಲ್ಲಿ ಕೆಲವೊಮ್ಮೆ ಮೋಡ ಕವಿದ ವಾತಾವರಣವಿರಲಿದೆ. ಮಧ್ಯಾಹ್ನ ಬಿಸಿಲು ಇರಲಿದೆ. ಸಂಜೆ ಅಥವಾ ರಾತ್ರಿಯಂದು ಆಯ್ದ ಕಡೆಗಳಲ್ಲಿ ಮಳೆ ಇರಲಿದೆ.

Advertisement

Advertisement
Tags :
altetsNewsNewsKannadaಕರಾವಳಿಪ್ರದೇಶಮಳೆರಾಜ್ಯಶನಿವಾರ
Advertisement
Next Article