For the best experience, open
https://m.newskannada.com
on your mobile browser.
Advertisement

ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.
09:32 AM May 11, 2024 IST | Ashika S
ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ  ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.

Advertisement

ಇಂದು ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಭಾರೀ ಗಾಳಿಯೊಂದಿಗೆ ಮಳೆಯಾಗುವ ಸಂಭವವಿದೆ.

ರಾಜ್ಯದಲ್ಲಿ ಇಂದಿನಿಂದ (ಶನಿವಾರ) ಮೇ 16ರ ವರೆಗೆ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

Advertisement

ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗದ ಕೆಲವು ಸ್ಥಳಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಹಾಸನ, ದಾವಣಗೆರೆ, ಮಂಡ್ಯ, ಮೈಸೂರು, ಚಾಮರಾಜನಗರ, ಹಾವೇರಿ, ಬೆಳಗಾವಿ, ಬಾಗಲಕೋಟೆ, ಗದಗ, ವಿಜಯಪುರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಬಿರುಗಾಳಿ ಸಹಿತ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.

Advertisement
Tags :
Advertisement