For the best experience, open
https://m.newskannada.com
on your mobile browser.
Advertisement

10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಎರಡು ದಿನಗಳ ಕಾಲ ಮಳೆಯ ಮುನ್ಸೂಚನೆ

ಮುಂದಿನ ಎರಡು ದಿನಗಳ ಕಾಲ ದೆಹಲಿ, ಪಂಜಾಬ್, ಹರ್ಯಾಣ, ಚಂಡೀಗಢ, ರಾಜಸ್ಥಾನ ಹಾಗೂ ಉತ್ತರ ಪ್ರದೇಶದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ, ಲಡಾಖ್​ನಲ್ಲಿ ಗುಡುಗು, ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ.
09:19 AM Mar 13, 2024 IST | Ashitha S
10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಎರಡು ದಿನಗಳ ಕಾಲ ಮಳೆಯ ಮುನ್ಸೂಚನೆ

ದೆಹಲಿ: ಮುಂದಿನ ಎರಡು ದಿನಗಳ ಕಾಲ ದೆಹಲಿ, ಪಂಜಾಬ್, ಹರ್ಯಾಣ, ಚಂಡೀಗಢ, ರಾಜಸ್ಥಾನ ಹಾಗೂ ಉತ್ತರ ಪ್ರದೇಶದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ, ಲಡಾಖ್​ನಲ್ಲಿ ಗುಡುಗು, ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ.

Advertisement

ಶುಕ್ರವಾರದವರೆಗೆ ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಪ್ರತ್ಯೇಕವಾದ ಲಘು ಮಳೆಯಾಗುವ ಮುನ್ಸೂಚನೆ ಇದೆ. ಇನ್ನು ಕರ್ನಾಟಕದಲ್ಲಿ ಒಣಹವೆ ಮುಂದುವರೆದಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸೆಕೆ ಹೆಚ್ಚಲಿದೆ.

Advertisement

Advertisement
Tags :
Advertisement