ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಮಮಂದಿರ ಲೋಕಾರ್ಪಣೆ ಎಲ್ಲ ಹಳ್ಳಿಗಳಲ್ಲೂ ನೇರ ಪ್ರಸಾರ

ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್‌ ಕರ್ನಾಟಕ ದಕ್ಷಿಣ ಪ್ರಾಂತ ವ್ಯಾಪ್ತಿಯಲ್ಲಿ ಜ.1ರಿಂದ ಜ.15ರವರೆಗೆ ಮಂತ್ರಾಕ್ಷತೆ, ನಿವೇದನಾ ಪತ್ರ ನೀಡುವ ಸಂಪರ್ಕ ಅಭಿಯಾನ ಹಮ್ಮಿಕೊಂಡಿರುವುದಾಗಿ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯವಾಹ ನಾ.ತಿಪ್ಪೇಸ್ವಾಮಿ ತಿಳಿಸಿದರು.
10:59 AM Dec 28, 2023 IST | Ashitha S

ಬೆಂಗಳೂರು: ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್‌ ಕರ್ನಾಟಕ ದಕ್ಷಿಣ ಪ್ರಾಂತ ವ್ಯಾಪ್ತಿಯಲ್ಲಿ ಜ.1ರಿಂದ ಜ.15ರವರೆಗೆ ಮಂತ್ರಾಕ್ಷತೆ, ನಿವೇದನಾ ಪತ್ರ ನೀಡುವ ಸಂಪರ್ಕ ಅಭಿಯಾನ ಹಮ್ಮಿಕೊಂಡಿರುವುದಾಗಿ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯವಾಹ ನಾ.ತಿಪ್ಪೇಸ್ವಾಮಿ ತಿಳಿಸಿದರು.

Advertisement

ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ 29 ಸಾವಿರಕ್ಕೂ ಹೆಚ್ಚಿನ ಗ್ರಾಮದ ಪ್ರತಿ ಮನೆಗಳನ್ನು ತಲುಪಿ ಸಂಪರ್ಕ ಅಭಿಯಾನ ಆಯೋಜಿಸಿದ್ದೇವೆ. ಜ.7ರಂದು ಮಹಾಸಂಪರ್ಕ ಅಭಿಯಾನ ನಡೆಯಲಿದೆ. ಅಭಿಯಾನದ ಪ್ರಯುಕ್ತ ಅಯೋಧ್ಯೆಯಿಂದ ಬಂದಿರುವ ಮಂತ್ರಾಕ್ಷತೆ, ಶ್ರೀರಾಮ ಮಂದಿರದ ಚಿತ್ರ ಹಾಗೂ ಮಂದಿರ ನಿರ್ಮಾಣದ ಇತಿಹಾಸ ತಿಳಿಸುವ ನಿವೇದನಾ ಪತ್ರ ವಿತರಣೆ ಮಾಡಲಾಗುತ್ತಿದೆ ಎಂದರು.

ಇನ್ನು ರಾಮ ಮಂದಿರ ನಿರ್ಮಾಣಕ್ಕಾಗಿ ನಡೆದ ನಿಧಿ ಸಂಗ್ರಹ ಅಭಿಯಾನದಲ್ಲಿ ರಾಜ್ಯದಿಂದ ಸುಮಾರು ₹180 ಕೋಟಿ-₹200 ಕೋಟಿಯಷ್ಟು ದೇಣಿಗೆ ಸಂಗ್ರಹವಾಗಿತ್ತು. ಆಗಲೂ ಸುಮಾರು 1 ಲಕ್ಷ ಕಾರ್ಯಕರ್ತರು ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಈಗ ಉದ್ಘಾಟನೆ ಸಂಬಂಧ ನಡೆಸುತ್ತಿರುವ ಸಂಪರ್ಕ ಅಭಿಯಾನದಲ್ಲಿ ಯಾವುದೇ ರೀತಿಯ ಹಣ, ನಿಧಿ ಸಂಗ್ರಹಿಸುತ್ತಿಲ್ಲ. ಭಕ್ತರೂ ನೀಡಬಾರದು ಎಂದು ಹೇಳಿದರು.

Advertisement

Advertisement
Tags :
GOVERNMENTindiaLatestNewsNewsKannadaನವದೆಹಲಿನೇರ ಪ್ರಸಾರಪ್ರಧಾನಿ ನರೇಂದ್ರ ಮೋದಿಮಂಗಳೂರು
Advertisement
Next Article