For the best experience, open
https://m.newskannada.com
on your mobile browser.
Advertisement

ಪೆರ್ಣಂಕಿಲ: 89 ಲಕ್ಷ ರೂ. ಮೊತ್ತದ ವಿವಿಧ ಕಾಮಗಾರಿಗಳ ಉದ್ಘಾಟನೆ

ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರ್ಣಂಕಿಲ ಗ್ರಾಮದಲ್ಲಿ 89 ಲಕ್ಷ ರೂ. ವೆಚ್ಚದಲ್ಲಿ ಪೂರ್ಣಗೊಂಡ ವಿವಿಧ ಕಾಮಗಾರಿಗಳನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು.
09:59 PM Feb 25, 2024 IST | Ashika S
ಪೆರ್ಣಂಕಿಲ  89 ಲಕ್ಷ ರೂ  ಮೊತ್ತದ ವಿವಿಧ ಕಾಮಗಾರಿಗಳ ಉದ್ಘಾಟನೆ

ಉಡುಪಿ: ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರ್ಣಂಕಿಲ ಗ್ರಾಮದಲ್ಲಿ 89 ಲಕ್ಷ ರೂ. ವೆಚ್ಚದಲ್ಲಿ ಪೂರ್ಣಗೊಂಡ ವಿವಿಧ ಕಾಮಗಾರಿಗಳನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು.

Advertisement

ಪೆರ್ಣಂಕಿಲ ಗ್ರಾಮದ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಸಂಪರ್ಕ ರಸ್ತೆ ಅಭಿವೃದ್ಧಿ, ಪೆರ್ಣಂಕಿಲ ಗ್ರಾಮದ ಜನತಾ ನಗರದಲ್ಲಿ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ನೀರಿನ ಓವರ್ ಹೆಡ್ ಟ್ಯಾಂಕ್ ನಿರ್ಮಾಣ, ಪೆರ್ಣಂಕಿಲ ಗ್ರಾಮದ ಜಡ್ಡು ರಸ್ತೆ ಅಭಿವೃದ್ಧಿ ಸೇರಿದಂತೆ ಒಟ್ಟು 89 ಲಕ್ಷ ರೂಪಾಯಿ ಮೊತ್ತದ ಕಾಮಗಾರಿಗಳನ್ನು ಉದ್ಘಾಟಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಕೋಡಿಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಇಂದಿರಾ ಕೆ, ಕೊಡಿಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಸದಾನಂದ ಪ್ರಭು, ಅರುಣ್ ಕುಮಾರ್ ಶೆಟ್ಟಿ, ರಾಮಾ ನಾಯ್ಕ್ ಹಾಗೂ ಪಕ್ಷದ ಹಿರಿಯರು, ಪ್ರಮುಖರು ಕಾರ್ಯಕರ್ತರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

Advertisement

Advertisement
Tags :
Advertisement