ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ದ.ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ 'ಟೀಂ ಇಂಡಿಯಾ'ಗೆ ಗೆಲುವು

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಕೇಪ್ ಟೌನ್​ನ ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಹಾಗೂ ಎರಡನೇ ಟೆಸ್ಟ್​ನಲ್ಲಿ ಟೀಂ ಇಂಡಿಯಾ ಆಫ್ರಿಕಾ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿದೆ.
06:05 PM Jan 04, 2024 IST | Ashitha S

ನ್ಯೂಲ್ಯಾಂಡ್ಸ್: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಕೇಪ್ ಟೌನ್​ನ ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಹಾಗೂ ಎರಡನೇ ಟೆಸ್ಟ್​ನಲ್ಲಿ ಟೀಂ ಇಂಡಿಯಾ ಆಫ್ರಿಕಾ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿದೆ.

Advertisement

ಈ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 1-1 ರಿಂದ ಸಮಬಲಗೊಳಿಸಿದೆ. ಆಫ್ರಿಕಾ ನೀಡಿದ 79 ರನ್​ಗಳ ಗೆಲುವಿನ ಗುರಿಯನ್ನು ಟೀಂ ಇಂಡಿಯಾ 3 ವಿಕೆಟ್​ ಕಳೆದುಕೊಂಡು 11.5 ಓವರ್​ಗಳಲ್ಲಿ ಸಾಧಿಸಿತು.

ಟೀಂ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ 28 ರನ್ ಸಿಡಿಸಿದರೆ ನಾಯಕ ರೋಹಿತ್​ ಶರ್ಮಾ ಅಜೇಯ 17 ರನ್​ಗಳ ಕೊಡುಗೆ ನೀಡಿದರು. ಉಳಿದಂತೆ ಶುಭ್​ಮನ್ ಗಿಲ್ 10 ರನ್ ಹಾಗೂ ವಿರಾಟ್ ಕೊಹ್ಲಿ 12 ರನ್ ಬಾರಿಸಿದರೆ, ಬೌಂಡರಿ ಬಾರಿಸುವ ಮೂಲಕ ಶ್ರೇಯಸ್ ಅಯ್ಯರ್ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

Advertisement

ದಕ್ಷಿಣ ಆಫ್ರಿಕಾ 176 ರನ್ ಗಳಿಗೆ ಆಲೌಟ್ ಆಗಿದ್ದು, ರೋಹಿತ್ ಶರ್ಮಾ ಮತ್ತು ತಂಡವು ಆತಿಥೇಯರನ್ನು 7 ವಿಕೆಟ್ ಗಳಿಂದ ಸೋಲಿಸಿ ಎರಡನೇ ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿತು. ಈ ಗೆಲುವಿನೊಂದಿಗೆ ರೋಹಿತ್ ಪಡೆ ಟೆಸ್ಟ್ ಸರಣಿಯನ್ನು 1-1ರಿಂದ ಸಮಬಲಗೊಳಿಸಿದೆ.

Advertisement
Tags :
indiaLatestNewsNewsKannadaYashasvi Jaiswalಟೀಂ ಇಂಡಿಯಾದ. ಆಫ್ರಿಕಾಬೆಂಗಳೂರು
Advertisement
Next Article