For the best experience, open
https://m.newskannada.com
on your mobile browser.
Advertisement

40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ: ಡಿ.ಕೆ.ಶಿವಕುಮಾರ್

ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ ಪರವಾಗಿ ವಿಶ್ವಾಸ ಮೂಡುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
05:37 PM May 17, 2024 IST | Ashika S
40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ  ಡಿ ಕೆ ಶಿವಕುಮಾರ್

ಬೆಂಗಳೂರು: ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ ಪರವಾಗಿ ವಿಶ್ವಾಸ ಮೂಡುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

Advertisement

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,  ನಮ್ಮ ರಾಜ್ಯದಲ್ಲಿ ಹೇಗೆ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೋ, ಅದೇ ರೀತಿ ಇಂಡಿಯಾ ಒಕ್ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ಜಾರಿ ಮಾಡಲಿದೆ ಜನರು ನಮ್ಮ ಯೋಜನೆಗಳ ಬಗ್ಗೆ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿಸಿದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ಮಾದರಿಯಲ್ಲಿ ಗ್ಯಾರಂಟಿ ಯೋಜನೆಗಳ ಜತೆಗೆ ಬಡವರಿಗೆ 10 ಕೆ.ಜಿ ಉಚಿತ ಅಕ್ಕಿ ಯೋಜನೆ ಘೋಷಿಸಿದ್ದಾರೆ ಎಂದರು.

Advertisement

ಅಧಿಕಾರಿಗಳ ಜೊತೆ ನಡೆದ ಸಭೆ ಬಗ್ಗೆ ಕೇಳಿದಾಗ, ಬರಗಾಲ, ಕುಡಿಯುವ ನೀರು, ಮೇವಿನ ಸಮಸ್ಯೆ ಮತ್ತಿತರ ವಿಚಾರಗಳ ಬಗ್ಗೆ ಅಧಿಕಾರಿಗಳ ಜೊತೆ ಪರಿಶೀಲನಾ ಸಭೆ ಮಾಡಿದ್ದೇವೆ ಎಂದು ಹೇಳಿದರು.

Advertisement
Tags :
Advertisement