ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ವಿಶ್ವಕಪ್ ಸೋಲಿಗೆ ಸೇಡು ತೀರಿಸಿಕೊಂಡ ಭಾರತ

ವಿಶ್ವಕಪ್‌ ಕ್ರಿಕೆಟ ಪಂದ್ಯಾಟದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ಸೋಲು ಕಂಡಿತ್ತು. ಆದರೆ ರಾಯ್‌ಪುರದಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಟಿ20 ಪಂದ್ಯದಲ್ಲಿ 20 ರನ್​ಗಳಿಂದ ಆಸೀಸ್ ತಂಡವನ್ನು ಮಣಿಸಿದ ಸೂರ್ಯಕುಮಾರ್ ಯಾದವ್ ಪಡೆ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಐದು ಪಂದ್ಯಗಳ ಟಿ20 ಸರಣಿಯನ್ನು ಗೆದ್ದು ಬೀಗಿದೆ.
06:43 AM Dec 02, 2023 IST | Ashika S

ನವದೆಹಲಿ: ವಿಶ್ವಕಪ್‌ ಕ್ರಿಕೆಟ್ ಪಂದ್ಯಾಟದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ಸೋಲು ಕಂಡಿತ್ತು. ಆದರೆ ರಾಯ್‌ಪುರದಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಟಿ20 ಪಂದ್ಯದಲ್ಲಿ 20 ರನ್​ಗಳಿಂದ ಆಸೀಸ್ ತಂಡವನ್ನು ಮಣಿಸಿದ ಸೂರ್ಯಕುಮಾರ್ ಯಾದವ್ ಪಡೆ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಐದು ಪಂದ್ಯಗಳ ಟಿ20 ಸರಣಿಯನ್ನು ಗೆದ್ದು ಬೀಗಿದೆ.

Advertisement

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲಯ ಬ್ಯಾಟಿಂಗ್ ಮಾಡಿದ ಭಾರತ ತಂಡ 9 ವಿಕೆಟ್ ಕಳೆದುಕೊಂಡು 175 ರನ್​ಗಳ ಟಾರ್ಗೆಟ್ ನೀಡಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ 7 ವಿಕೆಟ್ ಕಳೆದುಕೊಂಡು 157 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಸದ್ಯ ಭಾರತ ತಂಡ ಸರಣಿಯಲ್ಲಿ 3-1 ಅಂತರದ ಮುನ್ನಡೆ ಕಾಯ್ದುಕೊಂಡಿದೆ.

ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಟಾಸ್ ಗೆದ್ದು ಟೀಂ ಇಂಡಿಯಾವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಟೀಂ ಇಂಡಿಯಾದ ಆರಂಭಿಕ ಜೋಡಿ ಭರವಸೆಯ ಆರಂಭವನ್ನೇ ನೀಡಿತು. ಯಶಸ್ವಿ ಜೈಸ್ವಾಲ್ ಮತ್ತು ರುತುರಾಜ್ ಗಾಯಕ್ವಾಡ್ ಇಬ್ಬರೂ ಆರಂಭಿಕ ಅರ್ಧಶತಕದ ಜೊತೆಯಾಟವನ್ನು ಹಂಚಿಕೊಂಡರು. ಆದರೆ ನಂತರ ಈ ಜೋಡಿ ಬೇರ್ಪಟ್ಟಿತು. 37 ರನ್ ಗಳಿಸಿ ಜೈಸ್ವಾಲ್ ಔಟಾದರು. ಆ ಬಳಿಕ ಬಂದ ಉಪನಾಯಕ ಶ್ರೇಯಸ್ ಅಯ್ಯರ್ ಕೇವಲ 8 ರನ್ ಕಲೆಹಾಕಿ ತಕ್ಷಣವೇ ಔಟಾದರು. ಶ್ರೇಯಸ್ ನಂತರ ನಾಯಕ ಸೂರ್ಯಕುಮಾರ್ ಯಾದವ್ ಕೂಡ ಕೇವಲ 1 ರನ್​ಗಳಿಗೆ ಸುಸ್ತಾದರು.

Advertisement

Advertisement
Tags :
LatetsNewsNewsKannadaಆಸ್ಟ್ರೇಲಿಯಾಕ್ರಿಕೆಟ್ಭಾರತ ತಂಡವಿಶ್ವಕಪ್ಸೂರ್ಯಕುಮಾರ್ ಯಾದವ್
Advertisement
Next Article