ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

5ನೇ ಟೆಸ್ಟ್ ಪಂದ್ಯ: ಇಂಗ್ಲೆಂಡ್​ ವಿರುದ್ಧ ಅಭೂತ ಪೂರ್ವ ಗೆಲುವು ಸಾಧಿಸಿದ ಇಂಡಿಯಾ

ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್​ ವಿರುದ್ಧದ 5ನೇ ಮತ್ತು ಕೊನೆಯ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ಅಭೂತ ಪೂರ್ವ ಗೆಲುವು ಸಾಧಿಸಿದೆ. ಈ ಮೂಲಕ ಐದು ಪಂದ್ಯಗಳ ಸರಣಿಯನ್ನು ಭಾರತ ತಂಡ 4-1 ಅಂತರದಿಂದ ಗೆದ್ದುಕೊಂಡಿದೆ.
02:29 PM Mar 09, 2024 IST | Ashika S

ಧರ್ಮಶಾಲಾ: ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್​ ವಿರುದ್ಧದ 5ನೇ ಮತ್ತು ಕೊನೆಯ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ಅಭೂತ ಪೂರ್ವ ಗೆಲುವು ಸಾಧಿಸಿದೆ. ಈ ಮೂಲಕ ಐದು ಪಂದ್ಯಗಳ ಸರಣಿಯನ್ನು ಭಾರತ ತಂಡ 4-1 ಅಂತರದಿಂದ ಗೆದ್ದುಕೊಂಡಿದೆ.

Advertisement

ಟಾಸ್​ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ ಬ್ರಿಟಿಷ್ ಕ್ಯಾಪ್ಟನ್ ಬೆನ್​ ಸ್ಟೋಕ್ಸ್​ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಪರ ಆರಂಭಿಕ ಆಟಗಾರ ಝಾಕ್ ಕ್ರಾಲಿ (79) ಅರ್ಧಶತಕ ಬಾರಿಸಿ ಮಿಂಚಿದ್ದರು. ಆದರೆ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿ ಬಂದಿರಲಿಲ್ಲ.

ಕುಲ್ದೀಪ್ ಯಾದವ್ ಹಾಗೂ ರವಿಚಂದ್ರನ್ ಅಶ್ವಿನ್ ಸ್ಪಿನ್ ದಾಳಿಗೆ ಕ್ರೀಸ್​ ಕಚ್ಚಿ ನಿಲ್ಲಲು ಪರದಾಡಿದ ಇಂಗ್ಲೆಂಡ್ ಮೊದಲ ಇನಿಂಗ್ಸ್​ನಲ್ಲಿ 218 ರನ್​ಗಳಿಸಲಷ್ಟೇ ಶಕ್ತರಾದರು.

Advertisement

ಟೀಮ್ ಇಂಡಿಯಾ ಪರ ಕುಲ್ದೀಪ್ ಯಾದವ್ 5 ವಿಕೆಟ್ ಕಬಳಿಸಿದರೆ, ಅಶ್ವಿನ್ 4 ವಿಕೆಟ್ ಪಡೆದರು.

ಮೊದಲ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್​ಗೆ ಇಳಿದಿದ್ದ ಭಾರತದ ಆಟಗಾರರು ಬೃಹತ್​ ರನ್​ಗಳನ್ನ ಕಲೆ ಹಾಕಿದ್ದರು. ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 104 ರನ್ ಪೇರಿಸಿ ಜೈಸ್ವಾಲ್ (57) ಔಟಾದರು. ಇನ್ನು ರೋಹಿತ್ ಶರ್ಮಾ (103) ಹಾಗೂ ಶುಭ್​ಮನ್ ಗಿಲ್ (110) ಭರ್ಜರಿ ಶತಕ ಸಿಡಿಸಿದರು.

ದೇವದತ್ ಪಡಿಕ್ಕಲ್ (65) ಹಾಗೂ ಸರ್ಫರಾಝ್ ಖಾನ್ (56) ಅರ್ಧಶತಕ ಬಾರಿಸಿ ಮಿಂಚಿದರು. ಪರಿಣಾಮ 2ನೇ ದಿನದಾಟದ ಅಂತ್ಯಕ್ಕೆ ಟೀಮ್ ಇಂಡಿಯಾ ಸ್ಕೋರ್ 450 ರನ್​ಗಳ ಗಡಿ ದಾಟಿತು. ಮೂರನೇ ದಿನದಾಟದಲ್ಲಿ ಬ್ಯಾಟಿಂಗ್ ಮುಂದುವರೆಸಿದ ಕುಲ್ದೀಪ್ ಯಾದವ್ (30) ಹಾಗೂ ಜಸ್​ಪ್ರೀತ್ ಬುಮ್ರಾ 20 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಈ ಮೂಲಕ ಮೊದಲ ಇನಿಂಗ್ಸ್​ನಲ್ಲಿ 477 ರನ್ ಕಲೆಹಾಕಿ ಟೀಮ್ ಇಂಡಿಯಾ 259 ರನ್​ಗಳ ಮುನ್ನಡೆ ಪಡೆಯಿತು.

259 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡಕ್ಕೆ ಆರಂಭದಲ್ಲೇ ರವಿಚಂದ್ರನ್ ಅಶ್ವಿನ್ ಆಘಾತ ನೀಡಿದರು. ಪರಿಣಾಮ 103 ರನ್​ ಕಲೆಹಾಕುವಷ್ಟರಲ್ಲಿ ಇಂಗ್ಲೆಂಡ್ 5 ಪ್ರಮುಖ ವಿಕೆಟ್ ಕಳೆದುಕೊಂಡಿತು. ಇದಾಗ್ಯೂ ಒಂದೆಡೆ ಕ್ರೀಸ್ ಕಚ್ಚಿ ನಿಂತು ಆಡಿದ ಜೋ ರೂಟ್ (84) ಅರ್ಧಶತಕ ಬಾರಿಸಿದರು.

ಆದರೆ ಮತ್ತೊಂದೆಡೆ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ಇಂಗ್ಲೆಂಡ್ ತಂಡವು 195 ರನ್​ಗಳಿಗೆ ಆಲೌಟ್ ಆಗುವ ಮೂಲಕ ಇನಿಂಗ್ಸ್ ಹಾಗೂ 64 ರನ್​ಗಳಿಂದ ಸೋಲೊಪ್ಪಿಕೊಂಡಿದೆ. ಈ ಭರ್ಜರಿ ಗೆಲುವಿನ ಮೂಲಕ ಐದು ಪಂದ್ಯಗಳ ಸರಣಿಯನ್ನು ಟೀಮ್ ಇಂಡಿಯಾ 4-1 ಅಂತರದಿಂದ ಗೆದ್ದುಕೊಂಡಿದೆ. ಟೀಮ್ ಇಂಡಿಯಾ ಪರ ದ್ವಿತೀಯ ಇನಿಂಗ್ಸ್​ನಲ್ಲಿ ಜಸ್​ಪ್ರೀತ್ ಬುಮ್ರಾ ಮತ್ತು ಕುಲ್ದೀಪ್ ಯಾದವ್ ತಲಾ 2 ವಿಕೆಟ್,  ಅಶ್ವಿನ್ 5 ವಿಕೆಟ್ ಪಡೆದಿದ್ದಾರೆ.

Advertisement
Tags :
CRICKET MATCHLatetsNewsNewsKannada
Advertisement
Next Article