For the best experience, open
https://m.newskannada.com
on your mobile browser.
Advertisement

ಭಾರತದ ಮಾರಕ ದಾಳಿಗೆ ತತ್ತರಿಸಿದ ಆಂಗ್ಲರು: ಇಂಡಿಯಾಗೆ 434 ರನ್​ಗಳ ಜಯ

ರಾಜ್‌ಕೋಟ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಸರಣಿಯ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಏಕಪಕ್ಷೀಯ ಗೆಲುವು ದಾಖಲಿಸಿದೆ.
05:08 PM Feb 18, 2024 IST | Ashitha S
ಭಾರತದ ಮಾರಕ ದಾಳಿಗೆ ತತ್ತರಿಸಿದ ಆಂಗ್ಲರು  ಇಂಡಿಯಾಗೆ 434 ರನ್​ಗಳ ಜಯ

ರಾಜ್‌ಕೋಟ್‌: ರಾಜ್‌ಕೋಟ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಸರಣಿಯ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಏಕಪಕ್ಷೀಯ ಗೆಲುವು ದಾಖಲಿಸಿದೆ.

Advertisement

ಎರಡನೇ ಇನ್ನಿಂಗ್ಸ್​ನಲ್ಲಿ ಆಂಗ್ಲರನ್ನು 122 ರನ್​ಗಳಿಗೆ ಆಲೌಟ್ ಮಾಡಿದ ರೋಹಿತ್ ಪಡೆ ಬರೋಬ್ಬರಿ 434 ರನ್​ಗಳ ದಾಖಲೆಯ ಜಯ ಸಾಧಿಸಿದೆ.ಈ ಐತಿಹಾಸಿಕ ಗೆಲುವಿನೊಂದಿಗೆ ಟೀಂ ಇಂಡಿಯಾ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ.

ಈ ಪಂದ್ಯದಲ್ಲಿ ಭಾರತ ತಂಡ ಆಲ್ ರೌಂಡ್ ಪ್ರದರ್ಶನ ನೀಡಿ ಇಂಗ್ಲೆಂಡ್ ತಂಡವನ್ನು ಏಕಪಕ್ಷೀಯವಾಗಿ ಸೋಲಿಸಿತು. ಎರಡನೇ ಇನ್ನಿಂಗ್ಸ್​ನಲ್ಲಿ 557 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆಂಗ್ಲರು ಭಾರತದ ಮಾರಕ ದಾಳಿಗೆ ತತ್ತರಿಸಿ ಕೇವಲ 122 ರನ್‌ಗಳಿಗೆ ಆಲೌಟ್ ಆದರು. ಇಂಗ್ಲೆಂಡ್ ತಂಡವನ್ನು 434 ರನ್​ಗಳಿಂದ ಮಣಿಸಿದ ಭಾರತ, ಟೆಸ್ಟ್ ಕ್ರಿಕೆಟ್​ನಲ್ಲಿ ಅತಿ ದೊಡ್ಡ ಗೆಲುವು ದಾಖಲಿಸಿದ ಇತಿಹಾಸ ನಿರ್ಮಿಸಿದೆ.

Advertisement

Advertisement
Tags :
Advertisement