ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಐಎನ್​ಡಿಐಎ ಒಕ್ಕೂಟ ಸಾಯುತ್ತಿದೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಐಎನ್​ಡಿಐಎ ಒಕ್ಕೂಟ ಒಂದು ಫೋಟೋ ಶೂಟ್ ಅಷ್ಟೇ ಆಗಿತ್ತು. ಆ ಒಕ್ಕೂಟದವರಿಗೆ ನೀತಿ, ನಿಯತ್ತು, ನೇತೃತ್ವ ಮೂರೂ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ  ಹೇಳಿದರು.
02:58 PM Jan 27, 2024 IST | Ashika S

ಬೆಂಗಳೂರು: ಐಎನ್​ಡಿಐಎ ಒಕ್ಕೂಟ ಒಂದು ಫೋಟೋ ಶೂಟ್ ಅಷ್ಟೇ ಆಗಿತ್ತು. ಆ ಒಕ್ಕೂಟದವರಿಗೆ ನೀತಿ, ನಿಯತ್ತು, ನೇತೃತ್ವ ಮೂರೂ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ  ಹೇಳಿದರು.

Advertisement

ಐಎನ್​ಡಿಐಎ ಮೈತ್ರಿಕೂಟದ ಪಕ್ಷಗಳ ನಡುವೆ ಬಿರುಕು ಮೂಡಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಪ್ರಲ್ಹಾದ್ ಜೋಶಿ, ಅದೊಂದು ಅಸಹಜ, ಅಸ್ವಾಭಾವಿಕ ಒಪ್ಪಂದ ಆಗಿತ್ತು. ಹಾಗಾಗಿ ಐಎನ್​ಡಿಐಎ ಒಕ್ಕೂಟ ಸಾಯುತ್ತಿದೆ. ನಿತೀಶ್ ಕುಮಾರ್ ಬಿಜೆಪಿಗೆ ಸೇರುವ ಬಗ್ಗೆ ನಾನು ಏನೂ ಮಾತಾಡಲ್ಲ. ಅವರು ಪಕ್ಷ ಸೇರ್ಪಡೆ ಬಗ್ಗೆ ನನಗೆ ಗೊತ್ತಿಲ್ಲ ಎಂದರು.

ಶೆಟ್ಟರ್ ಪಕ್ಷ ಸೇರ್ಪಡೆ ವೇಳೆ ಇನ್ನೊಂದು ಅರ್ಧ ಗಂಟೆಯಲ್ಲಿ ಸೇರ್ಪಡೆ ಆಗುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ನನಗೆ ಕರೆ ಮಾಡಿ ಹೇಳಿದ್ದರು. ಜಗದೀಶ್​ ಶೆಟ್ಟರ್ ಅವರು ಬಿಜೆಪಿಯಲ್ಲೇ ಇದ್ದವರು. ಶೆಟ್ಟರ್ ವಾಪಸ್​​ ಬಂದಿದ್ದು ಪಕ್ಷಕ್ಕೆ ಒಳ್ಳೆಯದಾಗುತ್ತದೆ. ಶೆಟ್ಟರ್ ಅವರು ಬಂದಿದ್ದು ಬಿಜೆಪಿಗೆ ಅನುಕೂಲ ಆಗುತ್ತದೆ ಎಂದು ಪ್ರಲ್ಹಾದ್ ಜೋಶಿ ಹೇಳಿದರು.

Advertisement

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ತೊರೆದು ಮರಳಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ವೇಳೆ ಹುಬ್ಬಳ್ಳಿಯ ಬಿಜೆಪಿ ನಾಯಕರ ಪೈಕಿ ಒಬ್ಬರಾಗಿರುವ ಪ್ರಲ್ಹಾದ್ ಜೋಶಿ ಅನುಪಸ್ಥಿತರಾಗಿದ್ದರು. ಈ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜೋಶಿ, ಉಪರಾಷ್ಟ್ರಪತಿ ಜೊತೆ ಸಭೆಯಲ್ಲಿದ್ದ ಕಾರಣ ಭಾಗಿಯಾಗಿಲ್ಲ ಎಂದರು.

ಪಕ್ಷ ಬಿಟ್ಟವರನ್ನು ವಾಪಸ್ ಕರೆತರುವ ವಿಚಾರವಾಗಿ ಮಾತನಾಡಿದ ಜೋಶಿ, ಯಾರು ನಮ್ಮ ಪಕ್ಷದ ಸಿದ್ಧಾಂತ, ಮೋದಿ ನಾಯಕತ್ವ ಒಪ್ಪಿ ಬರುತ್ತಾರೋ ಸ್ವಾಗತ ಕೋರುತ್ತೇವೆ. ಅವರೆಲ್ಲರನ್ನೂ ಹಂತಹಂತವಾಗಿ ವಾಪಸ್ ಕರೆತರುವ ಬಗ್ಗೆ ರಾಷ್ಟ್ರೀಯ ಘಟಕ, ರಾಜ್ಯ ಘಟಕಗಳಲ್ಲಿ ತೀರ್ಮಾನ ಮಾಡುತ್ತೇವೆ ಎಂದರು.

 

Advertisement
Tags :
LatetsNewsNewsKannadaಐಎನ್​ಡಿಐಎಒಕ್ಕೂಟಕೇಂದ್ರ ಸಚಿವಪ್ರಲ್ಹಾದ್ ಜೋಶಿಫೋಟೋ ಶೂಟ್
Advertisement
Next Article