For the best experience, open
https://m.newskannada.com
on your mobile browser.
Advertisement

ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾದ 15 ಆಟಗಾರರ ಬಲಿಷ್ಠ ತಂಡ ಪ್ರಕಟ

2024ನೇ ಸಾಲಿನ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ 15 ಆಟಗಾರರನ್ನೊಳಗೊಂಡ ಬಲಿಷ್ಠ ಭಾರತ ಕ್ರಿಕೆಟ್ ತಂಡ ಪ್ರಕಟವಾಗಿದ್ದು, ರೋಹಿತ್ ಶರ್ಮಾ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ರೋಹಿತ್ ಶರ್ಮಾಗೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಉಪನಾಯಕರಾಗಿ ಸಾಥ್ ನೀಡಲಿದ್ದಾರೆ. ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಜೂನ್ 01ರಿಂದ ಅಮೆರಿಕ ಹಾಗೂ ವೆಸ್ಟ್ ಇಂಡೀಸ್‌ನಲ್ಲಿ ನಡೆಯಲಿದೆ.
03:59 PM Apr 30, 2024 IST | Ashitha S
ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾದ 15 ಆಟಗಾರರ ಬಲಿಷ್ಠ ತಂಡ ಪ್ರಕಟ

ಮುಂಬೈ: 2024ನೇ ಸಾಲಿನ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ 15 ಆಟಗಾರರನ್ನೊಳಗೊಂಡ ಬಲಿಷ್ಠ ಭಾರತ ಕ್ರಿಕೆಟ್ ತಂಡ ಪ್ರಕಟವಾಗಿದ್ದು, ರೋಹಿತ್ ಶರ್ಮಾ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ರೋಹಿತ್ ಶರ್ಮಾಗೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಉಪನಾಯಕರಾಗಿ ಸಾಥ್ ನೀಡಲಿದ್ದಾರೆ. ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಜೂನ್ 01ರಿಂದ ಅಮೆರಿಕ ಹಾಗೂ ವೆಸ್ಟ್ ಇಂಡೀಸ್‌ನಲ್ಲಿ ನಡೆಯಲಿದೆ.

Advertisement

ಐಪಿಎಲ್‌ನಲ್ಲಿ ಮಿಂಚಿರುವ ಆಟಗಾರರನ್ನು ನೇರವಾಗಿ ವಿಶ್ವಕಪ್‌ಗೆ ಆಯ್ಕೆ ಮಾಡುವ ಬದಲು ಈಗಾಗಲೇ ಭಾರತ ತಂಡದಲ್ಲಿ ಆಡಿರುವ ಹಾಗೂ ಸದ್ಯ ಉತ್ತಮ ಲಯದಲ್ಲಿರುವ ಆಟಗಾರರನ್ನೇ ಆಯ್ಕೆ ಮಾಡಿದೆ.

ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಹೀಗಿದೆ: ರೋಹಿತ್‌ ಶರ್ಮಾ(ನಾಯಕ), ಯಶಸ್ವಿ ಜೈಸ್ವಾಲ್‌, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ಸಂಜು ಸ್ಯಾಮ್ಸನ್‌, ರಿಷಭ್‌ ಪಂತ್‌, ಹಾರ್ದಿಕ್‌ ಪಾಂಡ್ಯ(ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್‌ ಪಟೇಲ್‌, ಶಿವಂ ದುಬೆ, ಕುಲ್ದೀಪ್‌ ಯಾದವ್‌, ಜಸ್‌ಪ್ರೀತ್‌ ಬುಮ್ರಾ, ಅರ್ಶ್‌ದೀಪ್‌ ಸಿಂಗ್‌,
ಮೊಹಮದ್‌ ಸಿರಾಜ್‌.

Advertisement

Advertisement
Tags :
Advertisement