ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ

ನವೆಂಬರ್ 23 ರಿಂದ ಪ್ರಾರಂಭವಾಗಲಿರುವ ಐದು ಪಂದ್ಯಗಳ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಟಿ20 ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಗಾಯದ ನಂತರ ವಿಶ್ವಕಪ್ ತಂಡದಿಂದ ಹೊರಗುಳಿದಿದ್ದ ಆಲ್ ರೌಂಡರ್ ಅಕ್ಷರ್ ಪಟೇಲ್ ಈ ಪಂದ್ಯದ ಮೂಲಕ ಮರಳಲಿದ್ದಾರೆ. ಭಾರತದ ವಿಶ್ವಕಪ್ ಅಭಿಯಾನದ ಭಾಗವಾಗಿದ್ದ ಸೂರ್ಯಕುಮಾರ್ ಯಾದವ್ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.
08:12 AM Nov 21, 2023 IST | Gayathri SG

ಮುಂಬೈ: ನವೆಂಬರ್ 23 ರಿಂದ ಪ್ರಾರಂಭವಾಗಲಿರುವ ಐದು ಪಂದ್ಯಗಳ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಟಿ20 ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಗಾಯದ ನಂತರ ವಿಶ್ವಕಪ್ ತಂಡದಿಂದ ಹೊರಗುಳಿದಿದ್ದ ಆಲ್ ರೌಂಡರ್ ಅಕ್ಷರ್ ಪಟೇಲ್ ಈ ಪಂದ್ಯದ ಮೂಲಕ ಮರಳಲಿದ್ದಾರೆ. ಭಾರತದ ವಿಶ್ವಕಪ್ ಅಭಿಯಾನದ ಭಾಗವಾಗಿದ್ದ ಸೂರ್ಯಕುಮಾರ್ ಯಾದವ್ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.

Advertisement

ಈ ಸರಣಿಯು ನವೆಂಬರ್ 23 ರಂದು ವಿಶಾಖಪಟ್ಟಣದಲ್ಲಿ ಪ್ರಾರಂಭವಾಗಿ ಡಿಸೆಂಬರ್ 3 ರಂದು ಬೆಂಗಳೂರಿನಲ್ಲಿ ಮುಕ್ತಾಯಗೊಳ್ಳಲಿದೆ. ಉಳಿದ ಮೂರು ಪಂದ್ಯಗಳು ನವೆಂಬರ್ 26 ರಂದು ತಿರುವನಂತಪುರದಲ್ಲಿ, ನವೆಂಬರ್ 28 ರಂದು ಗುವಾಹಟಿಯಲ್ಲಿ ಮತ್ತು ಡಿಸೆಂಬರ್ 1 ರಂದು ನಾಗ್ಪುರದಲ್ಲಿ ನಡೆಯಲಿದೆ.

ಪಾದದ ಗಾಯದ ಸಮಸ್ಯೆಯಿಂದಾಗಿ ಸ್ಟಾರ್ ಇಂಡಿಯಾ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಸರಣಿಗೆ ಗೈರಾಗಿದ್ದಾರೆ. ಇದರ ಜೊತೆಗೆ ಯುಜ್ವೇಂದ್ರ ಚಹಲ್ ಮತ್ತು ಸಂಜು ಸ್ಯಾಮ್ಸನ್ ಅವರನ್ನು ಕೂಡ ಆಯ್ಕೆ ಮಾಡಲಾಗಿಲ್ಲ. ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಚಹಲ್ ಮತ್ತು ಸ್ಯಾಮ್ಸನ್ ಅವರನ್ನು ಕೈಬಿಟ್ಟ ನಿರ್ಧಾರವು ಅಭಿಮಾನಿಗಳಿಗೆ ದೊಡ್ಡ ಆಘಾತವಾಗಿದೆ.

Advertisement

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್.

ಆಸ್ಟ್ರೇಲಿಯಾ: ಮ್ಯಾಥ್ಯೂ ವೇಡ್ (ನಾಯಕ), ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಜೋಶ್ ಇಂಗ್ಲಿಸ್, ಜೇಸನ್ ಬೆಹ್ರೆಂಡಾರ್ಫ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಸ್ಪೆನ್ಸರ್ ಜಾನ್ಸನ್, ಆ್ಯಡಂ ಝಂಪಾ, ತನ್ವೀರ್ ಸಂಘ.'

https://t.co/2gHMGJvBby 

Advertisement
Tags :
LatestNewsMUMBAINewsKannadaಮುಂಬೈ
Advertisement
Next Article