For the best experience, open
https://m.newskannada.com
on your mobile browser.
Advertisement

ಇಂದಿನಿಂದ ಭಾರತ-ಇಂಗ್ಲೆಂಡ್ 5ನೇ ಟೆಸ್ಟ್ ಆರಂಭ

ಧರ್ಮಶಾಲಾದಲ್ಲಿರುವ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಇಂದಿನಿಂದ ಶುರುವಾಗಲಿರುವ ಸರಣಿಯ ಅಂತಿಮ ಐದನೇ ಟೆಸ್ಟ್ ಪಂದ್ಯದಲ್ಲಿ ಭಾರತವು ಇಂಗ್ಲೆಂಡ್ ವಿರುದ್ಧ ಸೆಣೆಸಾಟ ನಡೆಸಲಿದೆ. 3-1 ಅಂತರದ ಮುನ್ನಡೆ ಸಾಧಿಸಿರುವ ಭಾರತ ಈಗಾಗಲೇ ಸರಣಿಯನ್ನು ವಶಪಡಿಸಿಕೊಂಡಾಗಿದೆ.
07:24 AM Mar 07, 2024 IST | Ashitha S
ಇಂದಿನಿಂದ ಭಾರತ ಇಂಗ್ಲೆಂಡ್ 5ನೇ ಟೆಸ್ಟ್ ಆರಂಭ

ಹಿಮಾಚಲ ಪ್ರದೇಶ: ಧರ್ಮಶಾಲಾದಲ್ಲಿರುವ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಇಂದಿನಿಂದ ಶುರುವಾಗಲಿರುವ ಸರಣಿಯ ಅಂತಿಮ ಐದನೇ ಟೆಸ್ಟ್ ಪಂದ್ಯದಲ್ಲಿ ಭಾರತವು ಇಂಗ್ಲೆಂಡ್ ವಿರುದ್ಧ ಸೆಣೆಸಾಟ ನಡೆಸಲಿದೆ. 3-1 ಅಂತರದ ಮುನ್ನಡೆ ಸಾಧಿಸಿರುವ ಭಾರತ ಈಗಾಗಲೇ ಸರಣಿಯನ್ನು ವಶಪಡಿಸಿಕೊಂಡಾಗಿದೆ.

Advertisement

ಇನ್ನು ಕಳಪೆ ಫಾರ್ಮ್​ನಲ್ಲಿರುವ ರಜತ್ ಪಾಟಿದರ್ ಜಾಗದಲ್ಲಿ ಕರ್ನಾಟಕದ ದೇವದತ್ ಪಡಿಕ್ಕಲ್ ಟೆಸ್ಟ್ ಕ್ರಿಕೆಟಿಗೆ ಪಾದಾರ್ಪಣೆ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ, ಪಾಟಿದಾರ್​ಗೆ ಮತ್ತೊಂದು ಅವಕಾಶ ನೀಡುಲಿದ್ದಾರಂತೆ. ಅಂತೆಯೆ ಪಡಿಕ್ಕಲ್ ಕೂಡ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸುಕೊಳ್ಳುವ ಸಾಧ್ಯತೆ ಇದೆ.

ಕೆಲಸದ ಹೊರೆ ನಿರ್ವಹಣೆಯ ಭಾಗವಾಗಿ ರಾಂಚಿಯಲ್ಲಿ ನಡೆದ ನಾಲ್ಕನೇ ಟೆಸ್ಟ್‌ನಿಂದ ವಿಶ್ರಾಂತಿ ಪಡೆದಿದ್ದ ಭಾರತದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು ಧರ್ಮಶಾಲಾದ ಐದನೇ ಟೆಸ್ಟ್‌ಗೆ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ.

Advertisement

ಇನ್ನು ರವಿಚಂದ್ರನ್ ಅಶ್ವಿನ್ ಅವರು ಧರ್ಮಶಾಲಾದಲ್ಲಿರುವ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​(ಎಚ್‌ಪಿಸಿಎ) ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್‌ಗೆ ಮೈದಾನಕ್ಕಿಳಿದಾಗ ಅವರ ವೃತ್ತಿಜೀವನದಲ್ಲಿ ದೊಡ್ಡ ಸಾಧನೆ ಮಾಡಲಿದ್ದಾರೆ. ಅವರು 100 ಟೆಸ್ಟ್ ಪಂದ್ಯಗಳನ್ನು ಆಡಿದ 14 ನೇ ಭಾರತೀಯ ಮತ್ತು ಎರಡನೇ ಭಾರತೀಯ ಸ್ಪಿನ್ನರ್ ಆಗಲಿದ್ದಾರೆ.

ಭಾರತ ಸಂಭಾವ್ಯ ಪ್ಲೇಯಿಂಗ್ ಇಲೆವೆನ್- ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್/ ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ರವೀಂದ್ರ ಜಡೇಜಾ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಸರ್ಫರಾಜ್ ಖಾನ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್: ಬೆನ್ ಡಕೆಟ್, ಝಾಕ್ ಕ್ರಾಲಿ, ಒಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ಟಾಮ್ ಹಾರ್ಟ್ಲಿ, ಶೋಯೆಬ್ ಬಶೀರ್, ಜೇಮ್ಸ್ ಆಂಡರ್ಸನ್, ಮಾರ್ಕ್ ವುಡ್.

Advertisement
Tags :
Advertisement