For the best experience, open
https://m.newskannada.com
on your mobile browser.
Advertisement

ಅಮೆರಿಕ: ಮನೆಯಲ್ಲಿ ಕೇರಳ ಮೂಲದ ದಂಪತಿ, ಅವಳಿ ಮಕ್ಕಳು ಶವವಾಗಿ ಪತ್ತೆ !

  ಅಮೆರಿಕದಲ್ಲಿ ಕೇರಳ ಮೂಲದ ದಂಪತಿ ಹಾಗೂ ಅವರ ಅವಳಿ ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಕೊಲೆಯೋ ಅಥವಾ ಆತ್ಮಹತ್ಯೆಯೋ ಎನ್ನುವ ಕುರಿತು ನಿಖರ ಮಾಹಿತಿ ತಿಳಿದು ಬಂದಿಲ್ಲ.
02:36 PM Feb 14, 2024 IST | Ashitha S
ಅಮೆರಿಕ  ಮನೆಯಲ್ಲಿ ಕೇರಳ ಮೂಲದ ದಂಪತಿ  ಅವಳಿ ಮಕ್ಕಳು ಶವವಾಗಿ ಪತ್ತೆ

ಅಮೆರಿಕ: ಅಮೆರಿಕದಲ್ಲಿ ಕೇರಳ ಮೂಲದ ದಂಪತಿ ಹಾಗೂ ಅವರ ಅವಳಿ ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಕೊಲೆಯೋ ಅಥವಾ ಆತ್ಮಹತ್ಯೆಯೋ ಎನ್ನುವ ಕುರಿತು ನಿಖರ ಮಾಹಿತಿ ತಿಳಿದು ಬಂದಿಲ್ಲ.

Advertisement

ಆನಂದ್ ಸುಜಿತ್ ಹೆನ್ರಿ ಹಾಗೂ ಪತ್ನಿ ಆಲಿಸ್ ಪ್ರಿಯಾಂಕಾ ಮತ್ತು 4 ವರ್ಷದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಸಂಬಂಧಿಕರು ಕರೆ ಮಾಡಿದಾಗ ರಿಸೀವ್ ಮಾಡದ ಕಾರಣ ಅವರು ಮನೆಗೆ ಬಂದಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೆಗೆ ಬಂದು ತಪಾಸಣೆ ನಡೆಸಿದಾಗ ದಂಪತಿ ಶವ ಬಾತ್​ ರೂಮ್​ನಲ್ಲಿ ಕಂಡುಬಂದಿದೆ. ಇಬ್ಬರು ಮಕ್ಕಳು ಕೋಣೆಯಲ್ಲಿ ಶವವಾಗಿದ್ದರು.

ದಂಪತಿ ಮೈಮೇಲೆ ಗುಂಡಿನ ಗುರುತುಗಳಿದ್ದವು. ಬಾತ್​ರೂಮ್​ನಿಂದ 9 ಎಂಎಂ ಪಿಸ್ತೂಲ್ ಮತ್ತು ಲೋಡ್​ ಸಜೀವ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸದ್ಯದ ಮಾಹಿತಿ.

Advertisement

Advertisement
Tags :
Advertisement