ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಯುಎಸ್‌ ನಲ್ಲಿ ಸ್ನಾತಕೋತ್ತರ ಪದವಿಗೆ ತೆರಳಿದ್ದ ಭಾರತೀಯ ವಿದ್ಯಾರ್ಥಿ ಶವವಾಗಿ ಪತ್ತೆ

ಕ್ಲೀವ್‌ಲ್ಯಾಂಡ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಸ್ನಾತಕೋತ್ತರ ಪದವಿಗಾಗಿ 2023 ರಲ್ಲಿ ಅಮೆರಿಕಕ್ಕೆ ತೆರಳಿದ್ದ ಹೈದರಾಬಾದ್‌ನ 25 ವರ್ಷದ ವಿದ್ಯಾರ್ಥಿಯೊಬ್ಬ ಶವವಾಗಿ ಪತ್ತೆಯಾಗಿರುವುದಾಗಿ ನ್ಯೂಯಾರ್ಕ್‌ನಲ್ಲಿರುವ ಭಾರತೀಯ ಕಾನ್ಸುಲೇಟ್ ಇಂದು ತಿಳಿಸಿದೆ.
10:32 AM Apr 09, 2024 IST | Ashitha S

ಓಹಿಯೋ: ಕ್ಲೀವ್‌ಲ್ಯಾಂಡ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಸ್ನಾತಕೋತ್ತರ ಪದವಿಗಾಗಿ 2023 ರಲ್ಲಿ ಅಮೆರಿಕಕ್ಕೆ ತೆರಳಿದ್ದ ಹೈದರಾಬಾದ್‌ನ 25 ವರ್ಷದ ವಿದ್ಯಾರ್ಥಿಯೊಬ್ಬ ಶವವಾಗಿ ಪತ್ತೆಯಾಗಿರುವುದಾಗಿ ನ್ಯೂಯಾರ್ಕ್‌ನಲ್ಲಿರುವ ಭಾರತೀಯ ಕಾನ್ಸುಲೇಟ್ ಇಂದು ತಿಳಿಸಿದೆ.

Advertisement

ಮೊಹಮ್ಮದ್ ಅಬ್ದುಲ್ ಅರ್ಫಾತ್ ಸುಮಾರು ಮೂರು ವಾರಗಳಿಂದ ನಾಪತ್ತೆಯಾಗಿದ್ದ. ದೂತಾವಾಸ ಕಚೇರಿ ಅಬ್ದುಲ್ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದು, ಪತ್ತೆಹಚ್ಚಲು ಸ್ಥಳೀಯ ಕಾನೂನು ಜಾರಿ ಸಂಸ್ಥೆಗಳೊಂದಿಗೆ ಕೆಲಸ ಮಾಡುತ್ತಿದೆ ಎಂದು ಈ ಹಿಂದೆ ತಿಳಿಸಿತ್ತು. ಇಂದು ಬೆಳಗ್ಗೆ ಅವರು ಶವವಾಗಿ ಪತ್ತೆಯಾಗಿದ್ದಾರೆ ಎಂದು ರಾಯಭಾರ ಕಚೇರಿ ತಿಳಿಸಿದೆ.

ಅರ್ಫಾತ್ ಅವರು ಓಹಿಯೋದ ಕ್ಲೀವ್ಲ್ಯಾಂಡ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ತಿಳಿದು ದುಃಖವಾಗಿದೆ. ಶ್ರೀಅವರ ಕುಟುಂಬಕ್ಕೆ ನಮ್ಮ ಆಳವಾದ ಸಂತಾಪಗಳು” ಎಂದು ದೂತಾವಾಸವು ಎಕ್ಸ್ ಪೋಸ್ಟ್ ಮಾಡಿದೆ.

Advertisement

ಮೊಹಮ್ಮದ್ ಅಬ್ದುಲ್ ಅರ್ಫಾತ್ ಸಾವಿನ ಸಂಪೂರ್ಣ ತನಿಖೆಯನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಏಜೆನ್ಸಿಗಳೊಂದಿಗೆ ಸಂಪರ್ಕದಲ್ಲಿದೆ. ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ಸಾಗಿಸಲು ನಾವು ದುಃಖಿತ ಕುಟುಂಬಕ್ಕೆ ಎಲ್ಲ ರೀತಿಯ ಸಹಾಯವನ್ನು ನೀಡುತ್ತಿದ್ದೇವೆ” ಎಂದು ಹೇಳಿದೆ.

Advertisement
Tags :
crimedeathGOVERNMENTindiaKARNATAKANewsKannadaನವದೆಹಲಿವಿದ್ಯಾರ್ಥಿ
Advertisement
Next Article