For the best experience, open
https://m.newskannada.com
on your mobile browser.
Advertisement

ಅಮೆರಿಕದ ಓಹಿಯೋ ರಾಜ್ಯದಲ್ಲಿ ಭಾರತೀಯ ವಿದ್ಯಾರ್ಥಿ ಸಾವು

ಅಮೆರಿಕದ ಓಹಿಯೋ ರಾಜ್ಯದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ  ಮೃತಪಟ್ಟಿರುವುದಾಗಿ ನ್ಯೂಯಾರ್ಕ್‌ನಲ್ಲಿರುವ ಭಾರತದ ದೂತಾವಾಸ  ತಿಳಿಸಿದೆ.
08:11 AM Apr 06, 2024 IST | Ashika S
ಅಮೆರಿಕದ ಓಹಿಯೋ ರಾಜ್ಯದಲ್ಲಿ ಭಾರತೀಯ ವಿದ್ಯಾರ್ಥಿ ಸಾವು

ನ್ಯೂಯಾರ್ಕ್‌: ಅಮೆರಿಕದ ಓಹಿಯೋ ರಾಜ್ಯದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ  ಮೃತಪಟ್ಟಿರುವುದಾಗಿ ನ್ಯೂಯಾರ್ಕ್‌ನಲ್ಲಿರುವ ಭಾರತದ ದೂತಾವಾಸ  ತಿಳಿಸಿದೆ.

Advertisement

ಈ ಪ್ರಕರಣದ ಕುರಿತು ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಭಾರತದಲ್ಲಿನ ಅವರ ಕುಟುಂಬದೊಂದಿಗೆ ಸಂಪರ್ಕ ಇಟ್ಟುಕೊಳ್ಳಲಾಗಿದೆ ಎಂದು ಕಾನ್ಸುಲೇಟ್ ತಿಳಿಸಿದೆ.

“ಓಹಿಯೋದ ಕ್ಲೀವ್‌ಲ್ಯಾಂಡ್‌ನಲ್ಲಿರುವ ಭಾರತೀಯ ವಿದ್ಯಾರ್ಥಿ ಉಮಾ ಸತ್ಯ ಸಾಯಿ ಗಡ್ಡೆ ಅವರು ನಿಧನ ಹೊಂದಿದ್ದಾರೆ. ಅವರ ಸಾವಿನಿಂದ ತೀವ್ರ ದುಃಖವಾಗಿದೆ” ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಎಕ್ಸ್‌ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

Advertisement

“ಉಮಾ ಗಡ್ಡೆಯವರ ಪಾರ್ಥಿವ ಶರೀರವನ್ನು ಭಾರತಕ್ಕೆ ಶೀಘ್ರವಾಗಿ ಸಾಗಿಸುವುದು ಸೇರಿದಂತೆ ಸಾಧ್ಯವಿರುವ ಎಲ್ಲ ಸಹಾಯವನ್ನು ವಿಸ್ತರಿಸಲಾಗುತ್ತಿದೆ” ಎಂದು ಕಾನ್ಸುಲೇಟ್ ತಿಳಿಸಿದೆ.

2024ರ ಆರಂಭದಿಂದ, ಅಮೆರಿಕದಲ್ಲಿ ಕನಿಷ್ಠ ಅರ್ಧ ಡಜನ್ ಭಾರತೀಯ ಮತ್ತು ಭಾರತೀಯ ಮೂಲದ ವಿದ್ಯಾರ್ಥಿಗಳ ಸಾವುಗಳು ಸಂಭವಿಸಿವೆ. ಇವರ ಮೇಲಿನ ದಾಳಿಗಳ ಸಂಖ್ಯೆಯಲ್ಲಿ ಹೆಚ್ಚಳ ಆಗಿದ್ದು, ಸಮುದಾಯದಲ್ಲಿ ಆತಂಕಕ್ಕೂ ಕಾರಣವಾಗಿದೆ.

Advertisement
Tags :
Advertisement